ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ

 ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನ್ಯಾ.ಸದಾಶಿವ ಅಯೋಗದ ವರದಿ ಜಾರಿ ಮಾಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಮಸ್ಕಿ ಅಶೋಕ ವೃತ್ತದಲ್ಲಿ ಪ್ರತಿಭಟಿಸಲಾಯಿತು. ಸಾಹಿತಿ ಸಿ.ದಾನಪ್ಪ, ಜಿ.ಪಂ. ಮಾಜಿ ಸದಸ್ಯ ದೊಡ್ಡಪ್ಪ ಮುರಾರಿ, ಹನುಮಂತಪ್ಪ ವೆಂಕಟಾಪೂರ, ಮೌನೇಶ ಮುರಾರಿ ಇತರರಿದ್ದರು.

Published on

ಮಸ್ಕಿ: ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಮೀಸಲಾತಿ ಐಕ್ಯ ಹೋರಾಟ ಸಮಿತಿವತಿ ಗುರುವಾರ ಕರೆ ನೀಡಿದ್ದ ಬಂದ್ ಗುರುವಾರ ಪಟ್ಟಣದಲ್ಲಿ ಯಶಸ್ವಿಯಾಯಿತು.

ಪಟ್ಟಣದಲ್ಲಿ ಬೆಳಗ್ಗೆ ಅಲ್ಲಲ್ಲಿ ಕೆಲವು ಅಂಗಡಿ, ಹೋಟೆಲ್‌ಗಳು ತೆರೆದಿದ್ದವು. ಪ್ರತಿಭಟನಾಕಾರರು ತೆರಳಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡುತ್ತಿದ್ದ ದೃಶ್ಯ ಕಂಡು ಬಂತು. ಗಾಂಧಿನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾಕಾರರು ಬೈಕ್ ರ‌್ಯಾಲಿ ನಡೆಸಿದರು. ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟಿಸಿದರು. ಅಶೋಕ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಒಳ ಮೀಸಲಾತಿ ಜಾರಿಗೆಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಅಶೋಕ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸಾಹಿತಿ ಸಿ.ದಾನಪ್ಪ, ಜಿ.ಪಂ. ಮಾಜಿ ಸದಸ್ಯ ದೊಡ್ಡಪ್ಪ ಮುರಾರಿ, ಹನುಮಂತಪ್ಪ ವೆಂಕಟಾಪೂರ, ಮೌನೇಶ ಮುರಾರಿ ಸೇರಿದಂತೆ ಹಲವಾರು ಮುಖಂಡರು ಮಾತಾಡಿ ಒಳ ಮೀಸಲಾತಿ ಜಾರಿ ಆಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು. ಬಂದ್ ಹಿನ್ನೆಲೆ ಸಿಪಿಐ ಬಾಲಚಂದ್ರ ಡಿ.ಲಕ್ಕಂ. ಪಿಎಸ್‌ಐ ತಾರಾಬಾಯಿ, ಕ್ರೈಂ ಬ್ರ್ಯಾಂಚ್ ಪಿಎಸ್‌ಐ ಭೀಮದಾಸ್ ನೇತೃತ್ವದಲ್ಲಿ ಬೀಗಿ ಬಂದೋಬಸ್ತ್ ಒದಗಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net