ತಲೇಖಾನ್ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Maski news
ಮಸ್ಕಿ ತಾಲೂಕಿನ ತಲೇಖಾನ್ ಗ್ರಾಪಂ ಅಧ್ಯಕ್ಷೆಯಾಗಿ ಉಮವ್ವ ಗ್ಯಾನಪ್ಪ ರಾಠೋಡ್, ಉಪಾಧ್ಯಕ್ಷೆಯಾಗಿ ಲಕ್ಷ್ಮೀ ಕನಕಪ್ಪ ಗುಡಿಯಾಳ ಆಯ್ಕೆಯಾದರು. ಕೆಪಿಸಿಸಿ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಸಿದ್ದನಗೌಡ ತುರ್ವಿಹಾಳ, ಕಾಂಗ್ರೆಸ್ ಮುಖಂಡರಾದ ಎಲ್.ಟಿ,ನಾಯಕ, ಚನ್ನಬಸನಗೌಡ, ಶಂಭುಲಿಂಗಪ್ಪ ವಿಟ್ಲಾಪುರ, ತಾಪಂ ಮಾಜಿ ಸದಸ್ಯ ತಿಮ್ಮಣ್ಣ, ಭೋಜಪ್ಪ ಜಾಧವ ಇತರರಿದ್ದರು.
Published on

ಮಸ್ಕಿ: ತಲೇಖಾನ್ ಗ್ರಾಪಂ ಅಧ್ಯಕ್ಷೆಯಾಗಿ ಉಮವ್ವ ಗ್ಯಾನಪ್ಪ ರಾಠೋಡ್, ಉಪಾಧ್ಯಕ್ಷೆಯಾಗಿ ಲಕ್ಷ್ಮೀ ಕನಕಪ್ಪ ಗುಡಿಯಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಪಂ 20 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್ ಬೆಂಬಲಿತ 14 ಹಾಗೂ ಬಿಜೆಪಿ ಬೆಂಬಲಿತ 6 ಜನ ಸದಸ್ಯರಿದ್ದಾರೆ. ಗ್ರಾಪಂಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮೀಸಲಾತಿ ಪ್ರಶ್ನಿಸಿ ಕೆಲ ಸದಸ್ಯರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ಚುನಾವಣೆಗೆ ತಡೆಯಾಜ್ಞೆ ನೀಡಲಾಗಿತ್ತು. ನಿಗದಿತ ಮೀಸಲಾತಿಯಂತೆ ಚುನಾವಣೆ ನಡೆಸಲು ನ್ಯಾಯಾಲಯ ಸೂಚನೆ ನೀಡಿತ್ತು. ಸಿಡಿಪಿಒ ಅಶೋಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net