

ಮಸ್ಕಿ: ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ. ಆಗ ದೇಶ ಅಭಿವೃದ್ಧಿಯಾಗಲಿದೆ ಎಂದು ತಹಸೀಲ್ದಾರ್ ಡಾ.ಕೆ.ಮಲ್ಲಪ್ಪ ಯರಗೋಳ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕ ಮಟ್ಟದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಮಿತಿಯ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಬುಧವಾರ ಮಾತನಾಡಿದರು. ದುಡಿಯುವ ಮಕ್ಕಳು ಕಂಡುಬಂದಲ್ಲಿ ಕೆಲಸದಿಂದ ಬಿಡಿಸಿ. ಶಾಲೆಗೆ ಕಳಿಸಬೇಕು. ಮಗುವನ್ನು ಕೆಲಸಕ್ಕೆ ನೇಮಿಸಿಕೊಂಡಿರುವ ಮಾಲೀಕರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಎಂದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ ಮಾತನಾಡಿ, ಇಲಾಖೆಯಿಂದ ನಿರಂತರವಾಗಿ ಕಾನೂನು ಅರಿವು ನೆರವು ಮತು ಜನ ಜಾಗೃತಿ ಮೂಡಿಸುತ್ತಿದ್ದು, ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಬಾಲ ಕಾರ್ಮಿಕರನ್ನು ಬಳಸಿಕೊಂಡಲ್ಲಿ 50,000 ರೂ. ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು.
ಪಟ್ಟಣದಲ್ಲಿ ಅಧಿಕಾರಿಗಳ ತಂಡ ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಿತು. ಗ್ರೇಡ್-2 ತಹಸೀಲ್ದಾರ್ ಅಶೋಕ ಪವರ್, ಕಾರ್ಮಿಕ ನಿರೀಕ್ಷಕರಾದ ಶಾಂತಮೂರ್ತಿ, ಸಿ.ಆರ್.ಪಿ ರಾಮಸ್ವಾಮಿ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಾಂಸ್ಥಿಕ ರಕ್ಷಣಾಧಿಕಾರಿ ಹನುಮೇಶ, ಮೇಲ್ವಿಚಾರಕಿ ಶಿವಲೀಲಾ ಹಿರೇಮಠ ಇತರರಿದ್ದರು.