ಉತ್ತಮ ಆರೋಗ್ಯಕ್ಕಾಗಿ ಪರಿಸರ ಕಾಪಾಡಿ ತಹಸೀಲ್ದಾರ್ ಅರಮನೆ ಸುಧಾ

Maski swachata seva
ಮಸ್ಕಿಯ ಹೊಸ ಬಸ್ ನಿಲ್ದಾಣದಲ್ಲಿ ಪುರಸಭೆ ಸಿಬ್ಬಂದಿ ಸ್ವಚ್ಛತಾ ಸೇವಾ ಕಾರ್ಯಕ್ಕೆ ಸಜ್ಜಾಗಿರುವುದು.
Published on

ಮಸ್ಕಿ: ಸುತ್ತಲಿನ ವಾತಾವರಣ ಸ್ವಚ್ಛವಾಗಿದ್ದಾಗಲೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ತಹಸೀಲ್ದಾರ್ ಅರಮನೆ ಸುಧಾ ಹೇಳಿದರು.

ಪಟ್ಟಣದ ಹೊಸ ಬಸ್‌ನಿಲ್ದಾಣ ಆವರಣದಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಭಾನುವಾರ ಪುರಸಭೆವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗಬೇಕೆಂದರೆ ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವೆಲ್ಲರೂ ನಡೆಯುವುದರ ಜತೆಗೆ ಅಕ್ಕ-ಪಕ್ಕದ ವಾತಾವರಣವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಪುರಸಭೆ ಮುಖ್ಯಅಧಿಕಾರಿ ನರಸರೆಡ್ಡಿ ಮಾತನಾಡಿ, ಪಟ್ಟಣದ ಸ್ವಚ್ಛತೆಗಾಗಿ ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಪುರಸಭೆ ಸಿಬ್ಬಂದಿಯೊಂದಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು.

ಎಲ್ಲೆಂದರಲ್ಲಿ ಕಸವನ್ನು ಬೀಸಾಡದೆ ಪುರಸಭೆ ಗುರುತಿಸಿದ ನಿರ್ದಿಷ್ಟ ಸ್ಥಳಗಳಲ್ಲಿ ಕಸವನ್ನು ವಿಲೇವಾರಿ ಮಾಡಿದರೆ ಪಟ್ಟಣವನ್ನು ಸ್ವಚ್ಛವಾಗಿಡಲು ಸಹಕಾರಿಯಾಗುತ್ತದೆ ಎಂದರು.

ಪುರಸಭೆ ಸದಸ್ಯರಾದ ಮಲ್ಲಯ್ಯ ಚಿಗರಿ, ಶರಣಯ್ಯ ಸೊಪ್ಪಿಮಠ, ಆರೋಗ್ಯ ಅಧಿಕಾರಿ ಗದ್ಯಪ್ಪ, ಸುನಿಲ್ ಕುಮಾರ್, ಎಂಜಿನಿಯರ್ ಮೀನಾಕ್ಷಿ, ಅಭಿನಂದನ್ ಸಂಸ್ಥೆಯ ರಾಮಣ್ಣ ಹಂಪರಗುಂದಿ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net