ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಲು ವಿತರಿಸಿ; ಜಿಪಂ ಸಿಇಒ ಶಶಿಧರ ಕುರೇರ ಸೂಚನೆ

19092022 Maski ZP CEO visit to school
Published on


ಮಸ್ಕಿ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಲು ವಿತರಿಸಬೇಕು. ನಾನು ಭೇಟಿ ನೀಡಿದಾಗ ಎಲ್ಲವೂ ಸರಿಯಿದ್ದರೆ ಪ್ರಯೋಜನವಿಲ್ಲ ಎಂದು ಶಿಕ್ಷಕರಿಗೆ ಜಿಪಂ ಸಿಇಒ ಶಶಿಧರ ಕುರೇರ ಸೂಚಿಸಿದರು.

ಜಂಗಮರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿ ಮಾತನಾಡಿದರು. ನರೇಗಾದಡಿ ನಿರ್ಮಿಸುತ್ತಿರುವ ಭೋಜನಾಲಯ ಪರಿಶೀಲಿಸಿದರು. ಹಾಲಾಪುರ ಗ್ರಾಪಂ ನೂತನ ಕಟ್ಟಡ, ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡ ಪರಿಶೀಲಿಸಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು. ಗುಡಿಹಾಳ ಕುಡಿಯುವ ನೀರಿನ ಕೆರೆಗೆ ಭೇಟಿ ನೀಡಿ ತುಂಗಭದ್ರಾ ಎಡದಂಡೆ ನಾಲೆಯಿಂದ ಕೆರೆಗೆ ನೀರು ಹರಿಸುವ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಮುಸ್ಲಿ ಕಾರ‌್ಲಕುಂಟಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿಯನ್ನು ಪರಿಶೀಲಿಸಿದರು. ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಸಿಇಒ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net