

ಮಡಿಕೇರಿ:
ಹಸಿರ ಪರಿಸರ, ಜಲಪ್ರದೇಶಗಳ ಸಂರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ಸೂಕ್ಷ÷್ಮ ಪರಿಸರ ವಲಯ ಮತ್ತು ವಿಶ್ವ ಪಾರಂಪರಿಕ ತಾಣ ಕಾನೂನು ಕೊಡಗಿನಲ್ಲಿ ಬಂಡವಾಳಶಾಹಿಗಳಿಗೆ ಅನ್ವಯವಾಗುತ್ತಿಲ್ಲ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿಎನ್‌ಸಿ ವತಿಯಿಂದ ನಾಪೋಕ್ಲುವಿನಲ್ಲಿ ಭಾನುವಾರ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು. ಸರ್ಕಾರದ ಕಾನೂನುಗಳನ್ನು ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮೇಲೆ ಹೇರಲಾಗುತ್ತಿದೆ.
ಆದಿಮಸಂಜಾತ ಕೊಡವ ಬುಡಕಟ್ಟು ಜನರು ಇಲ್ಲಿಯವರೆಗೆ ಹಸಿರಿನ ಕೊಡವ ಭೂಮಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಆದರೆ ಇಂದು ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ, ಭೂವಿಲೇವಾರಿ ಮಾಫಿಯಾಗಳು ಹಾಗೂ ಕಪುö್ಪಹಣದ ಬಂಡವಾಳಶಾಹಿಗಳು ಕೊಡವಲ್ಯಾಂಡ್ ನಾಶ ಮಾಡುತ್ತಿದ್ದಾರೆ ಮತ್ತು ಕೊಡವರನ್ನು ಬಲಿಪಶು ಮಾಡುತ್ತಿದ್ದಾರೆ. ಈ ಎಲ್ಲಾ ಮಾಫಿಯಾಗಳಿಗೆ ಆಡಳಿತ ವ್ಯವಸ್ಥೆಯ ಕೃಪಾ ಕಟಾಕ್ಷವಿದೆ. ಕೊಡವರಿಗೆ ಮಾತೃಭೂಮಿಯಲ್ಲಿ ನೆಲೆ ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ. ಇದಕ್ಕೆ ಕೊಡವ ವಿರೋಧಿಗಳ ಬೆಂಬಲವಿದೆ ಎಂದು ಆರೋಪಿಸಿದರು.
ರಾಷ್ಟಿçÃಯ ಹೆದ್ದಾರಿಯ ಕುಟ್ಟ ಸಮೀಪದ ಪೂಜೆಕಲ್ಲು ಗ್ರಾಮದಲ್ಲಿ ಜಲಗರ್ಭ ಮತ್ತು ಭೂಗರ್ಭ ಸ್ಫೋಟಕ್ಕೆ ಇಲ್ಲಿರುವ ಹೊರಗಿನ ಕಾರ್ಪೋರೇಟ್ ವಲಯಗಳ ಎರಡು ಎಸ್ಟೇಟ್‌ಗಳು ನೇರ ಕಾರಣವಾಗಿವೆ. ಬ್ರಹ್ಮಗಿರಿ ಪರ್ವತದ ಮೇಲೆ ಕೊಡಗು ವಯನಾಡ್ ಗಡಿ ರೇಖೆಯಲ್ಲಿ ನಿಂತಿರುವ ಫೈತ್ ಹಾಗೂ ಹೂವಿನ ಕಾಡು ಎಸ್ಟೇಟ್‌ಗಳಲ್ಲಿ ಬೃಹತ್ ಸರೋವರಗಳನ್ನು ನಿರ್ಮಿಸಲಾಗಿದೆ. ಮುಂದೆ ಫೈತ್ ಎಸ್ಟೇಟ್‌ನ ಬೃಹತ್ ಸರೋವರ ಸ್ಪೋಟಗೊಂಡು ನಾಣಚ್ಚಿ ಗ್ರಾಮ ಭೂಪ್ರಳಯಕ್ಕೆ ತುತ್ತಗಬಹುದು. ಇಲ್ಲಿ ಸಂಭವಿಸಲಿರುವ ಅನಾಹುತ ಲಕ್ಷ÷್ಮಣತೀರ್ಥ ವ್ಯಾಪ್ತಿಗೂ ವ್ಯಾಪಿಸಿ ಕ್ರಮೇಣ ಇಡೀ ಕೊಡಗಿಗೆ ಅನಾಹುತ ಎದುರಾಗಬಹುದು ಎಂದರು.
ಕುಟ್ಟ ಅತಿ ಎತ್ತರದ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿದ್ದು, ವಿಶ್ವ ಪಾರಂಪರಿಕ ತಾಣವಾಗಿದೆ. ಆದರೆ ಸÀರ್ಕಾರದ ಕಾನೂನು ಕೊಡವರಿಗೆ ಮಾತ್ರ ಅನ್ವಯವಾಗುತ್ತಿದ್ದು, ಬಂಡವಾಳಶಾಹಿಗಳು ಆಡಳಿತ ವ್ಯವಸ್ಥೆಯ ಕೃಪಾ ಕಟಾಕ್ಷದಿಂದ ಯಾವುದೇ ಸೂಕ್ಷ÷್ಮ ಪರಿಸರ ವಲಯದ ಕಾನೂನಿಗೆ ಒಳಪಡುತ್ತಿಲ್ಲ. ಕೊಡವರು ಮಾತ್ರ ಎಲ್ಲಾ ಕಾನೂನುಗಳಿಗೆ ಒಳಪಟ್ಟು ಆಡಳಿತ ವ್ಯವಸ್ಥೆಯಿಂದ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಟೌನ್ ಶಿಪ್, ನಗರೀಕರಣ, ವಿಲ್ಲಾ, ರೆಸಾರ್ಟ್ಗಳ ನಿರ್ಮಾಣದಿಂದ ಕೊಡಗಿನಲ್ಲಿ ಜನಸಂಖ್ಯೆ ಹೆಚ್ಚಾಗಲಿದ್ದು, ಇದನ್ನು ತಡೆದೊಳ್ಳುವ ಶಕ್ತಿ ಇಲ್ಲಿನ ಭೂಪ್ರದೇಶಕ್ಕೆ ಇಲ್ಲವಾದ ಕಾರಣ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದರು.
ಕಲಿಯಂಡ ಮೀನಾ, ಅಪ್ಪಚ್ಚಿರ ರೀನಾ, ನೆರವಂಡ ಮೀರಾ, ಪುಲ್ಲೇರ ಪದ್ಮಿನಿ, ಕರವಂಡ ಸರ್ಸು, ಕಲಿಯಂಡ ಪ್ರಕಾಶ್, ಅಪ್ಪಚ್ಚಿರ ರಮ್ಮಿ ನಾಣಯ್ಯ, ಕಾಟುಮಣಿಯಂಡ ಉಮೇಶ್, ಆಳ್‌ಮಂಡ ಜೈ, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಅಪ್ಪಾರಂಡ ಪ್ರಸಾದ್, ಮಣೋಟೀರ ಜಗದೀಶ್, ಮಣೋಟೀರ ಸ್ವರೂಪ್, ಪಟ್ಟಮಾಡ ಅಶೋಕ್, ಕರವಂಡ ಲವ, ಕೇಟೋಳಿರ ಹರೀಶ್, ಅರೆಯಡ ರತ್ನ, ಅಪ್ಪಚೆಟ್ಟೋಳಂಡ ಮನು, ಕುಲ್ಲೇಟೀರ ಬೇಬ ಅರುಣ ಮತ್ತಿತರರು ಪಾಲ್ಗೊಂಡಿದ್ದರು.