ಸಾಮೂಹಿಕ ವಿಸರ್ಜನಾ ಕಾರ್ಯಕ್ರಮ

S.p.swami photo
ಎಸ್.ಪಿ.ಸ್ವಾಮಿ
Published on

ಮದ್ದೂರು: ಗಣಪತಿಗಳ ಸಾಮೂಹಿಕ ವಿಸರ್ಜನಾ ಕಾರ್ಯಕ್ರಮವನ್ನು ಸೆ.10ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಮನ್‌ಮುಲ್ ನಿರ್ದೇಶಕ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗ್ಗೆ 10 ಗಂಟೆಗೆ ಪಟ್ಟಣದ ನಾಲ್ವಡಿ ಕೃಷ್ಣ ಒಡೆಯರ್ ವೃತ್ತದಿಂದ ಬೃಹತ್ ಮೆರವಣಿಗೆಯನ್ನು ಪಟ್ಟಣದ ಪೇಟೆಬೀದಿ ಮುಖಾಂತರ ಬೃಹತ್ ಮೆರವಣಿಗೆ ನಡೆಸಿ ಶಿಂಷಾ ನದಿಯಲ್ಲಿ 28 ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುವುದು ಎಂದು ತಿಳಿಸಿದರು.

ವಿಸರ್ಜನಾ ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ವಿವಿಧ ಜನಪದ ಕಲಾ ಪ್ರಕಾರಗಳು ಈ ಸಂದರ್ಭದಲ್ಲಿ ಭಾಗವಹಿಸುತ್ತಿದ್ದು ಕಾರ್ಯಕ್ರಮಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರ ಗಮನಕ್ಕೂ ತರಲಾಗಿದೆ ಎಂದರು.

ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ತಾಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಭಕ್ತಾದಿಗಳು ಆಗಮಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಮಾತನಾಡಿ, ಪಟ್ಟಣದಲ್ಲಿ ನಡೆದದ ಘಟನೆಯಲ್ಲಿ ಉಸ್ತುವಾರಿ ಸಚಿವರು ಒಂದೆರಡು ಕಲ್ಲೆಸೆದಿದ್ದಾರೆ ಎನ್ನುತ್ತಾರೆ. ಗೃಹ ಸಚಿವರು ಸಣ್ಣ ಘಟನೆ ಎನ್ನುತ್ತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಈಗ ಶಾಂತಿ ಸಭೆ ನಡೆಸಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸೋಮವಾರ ಘಟನೆ ಖಂಡಿಸಿ ಶಾಂತಿಯುತ ಪ್ರತಿಭಟನೆ ಮಾಡಿದವರ ಮೇಲೆ ಪೊಲೀಸರು ಎಫ್‌ಐಆರ್ ಹಾಕಿರುವುದು ಖಂಡನೀಯ. ನ್ಯಾಯ ಕೇಳಲು ಹೋದ ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ ಎಂದು ಪೊಲೀಸರ ನಡೆಗೆ ಖಂಡನೆ ವ್ಯಕ್ತಪಡಿಸಿದರು.

500 ಜನರ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜತೆ ಇರುತ್ತದೆ. ಯಾರು ಹೆದರಬೇಕಾದ ಅವಶ್ಯಕತೆ ಇಲ್ಲ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಮುಖಂಡರಾದ ಮ.ನ.ಪ್ರಸನ್ನಕುಮಾರ್, ಹಾಗಲಹಳ್ಳಿ ರಘು, ಸಿ.ಕೆ.ಸತೀಶ್, ಎಂ.ಸಿ.ಸಿದ್ದು ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net