ಸಾಮೂಹಿಕ ಗಾಯತ್ರಿ ಪೂಜೆ 31ಕ್ಕೆ

dvg saligrama ganesh shenai feb 19
Published on

ದಾವಣಗೆರೆ: ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಅಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತಿ ತಿಂಗಳ ಹುಣ್ಣಿಮೆಯಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ನೂಲು ಹುಣ್ಣಿಮೆ ಅಂಗವಾಗಿ ಆ. 31ರಂದು ಬೆಳಗ್ಗೆ 7 ಗಂಟೆಗೆ ನಡೆಯಲಿದೆ ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ನಗರದ ಜಯದೇವ ವೃತ್ತದಲ್ಲಿರುವ ಶಂಕರಮಠದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತರು ಆಗಮಿಸುವಂತೆ ಅವರು ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net