

ಧಾರವಾಡ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಉಪ ಸಮಾಜಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಶಿಫಾರಸು ಮಾಡಲು ಒತ್ತಾಯಿಸಿ ಅ. 13ರಂದು ಬೆಳಗ್ಗೆ 10ಕ್ಕೆ ಹುಬ್ಬಳ್ಳಿಯ ಗಬ್ಬೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಹೋರಾಟ ಮಾಡಲಾಗುವುದು ಎಂದು ಕೂಡಲ ಸಂಗಮದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ೬ನೇ ಹಂತದ ಚಳವಳಿ ಆರಂಭಗೊAಡಿದೆ. ಬೇಡಿಕೆಗಳ ಈಡೇರಿಕೆಗಾಗಿ ಹಲವು ವರ್ಷದಿಂದ ಹೋರಾಟ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ನ್ಯಾಯ ಕೊಡಿಸುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಕ್ಕೂ ಪ್ರಸ್ತಾವ ಸಲ್ಲಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯೊಳಗೆ ಮೀಸಲಾತಿ ಅನುಷ್ಠಾನಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದೇವೆ ಎಂದರು.
ಈಗಾಗಲೇ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ರುದ್ರಾಕ್ಷಿ ಕಂಕಣ ಧಾರಣೆಯ ಮೂಲಕ ಸಮಾಜವನ್ನು ಸಂಘಟನೆ ಮಾಡಲಾಗಿದೆ. ೧೩ರಂದು ಬೆಳಗ್ಗೆ ೧೦ಕ್ಕೆ ಹುಬ್ಬಳ್ಳಿ ಚನ್ನಮ್ಮ ವರ್ತುಳದಲ್ಲಿ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಬಂಕಾಪೂರ ಚೌಕ, ಯಲ್ಲಾಪೂರ ಓಣಿ ಮೂಲಕ ಪಾದಯಾತ್ರೆ ಹೊರಟು ಗಬ್ಬೂರ ರಾಷ್ಟಿçÃಯ ಹೆದ್ದಾರಿ ತಲುಪಲಾಗುವುದು. ನಂತರ ರಸ್ತೆ ತಡೆ ನಡೆಸುವ ಮೂಲಕ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಿಸಲಾಗುವುದು ಎಂದರು.
ಶಿವಲೀಲಾ ವಿನಯ ಕುಲಕರ್ಣಿ, ನಿಂಗಣ್ಣ ಕರಿಕಟ್ಟಿ, ಗೌರಮ್ಮ ಬಲೋಗಿ, ಪ್ರದೀಪಗೌಡ ಪಾಟೀಲ, ಪ್ರಕಾಶ ಭಾವಿಕಟ್ಟಿ, ಮಹಾಂತೇಶ ಕುರಟ್ಟಿದೇಸಾಯಿ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.