

ಬಾದಾಮಿ: ಗ್ರಾಮೀಣ ಪ್ರದೇಶದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವುದರಿಂದ ಬಡವರಿಗೆ ಅನುಕೂಲವಾಗುತ್ತದೆ ಎಂದು ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಹೇಳಿದರು.
ತಾಲೂಕಿನ ಮುತ್ತಲಗೇರಿ ಗ್ರಾಮದ ನಾಯಕಪ್ಪಜ್ಜನ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಮಹತ್ತರ ಘಟ್ಟ. ಸಾಮೂಹಿಕ ವಿವಾಹದಿಂದ ಕುಟುಂಬವಲ್ಲದೆ ದೇಶದ ಅಭಿವೃದ್ಧಿಗೂ ಸಹಕಾರಿ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಸರ್ವಧರ್ಮೀಯರ ಸಹಭಾಗಿತ್ವದಲ್ಲಿ ನಡೆಯುವ ಸರಳ ಸಾಮೂಹಿಕ ವಿವಾಹಗಳು ಸಾಮಾಜಿಕ ಹಾಗೂ ಆರ್ಥಿಕ ಹಿನ್ನೆಲೆಯಲ್ಲಿ ಬಡವರ ಪಾಲಿಗೆ ಸಂಜೀವಿನಿಯಾಗಿವೆ ಎಂದರು.
ಡಾ. ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪೂರ, ಜಿಪಂ ಮಾಜಿ ಉಪಾಧ್ಯಕ್ಷ ಹನುಮಂತ ಮಾವಿನಮರದ, ಜಿಪಂ ಮಾಜಿ ಸದಸ್ಯ ಎಸ್.ಡಿ.ಜೋಗಿನ, ಮಹಾಂತೇಶ ಬೆನ್ನಿ, ಮಹಾಂತೇಶ ಹಟ್ಟಿ, ಮುಖಂಡರಾದ ರಾಮಣ್ಣ ನೋಟಗಾರ, ಚಂದಪ್ಪಗೌಡ ಗೌಡರ, ಈಶ್ವರ ಚೆನ್ನಿ, ಬಸವರಾಜ ತಳವಾರ, ಕನಕಪ್ಪ ಪರಸನ್ನವರ, ಹುಚ್ಚಪ್ಪ ಹದ್ದನ್ನವರ ಇದ್ದರು.
ಬಿ.ಟಿ.ಹಳ್ಳಿ ನಿರೂಪಿಸಿದರು. ಪ್ರಕಾಶ ನಾಯ್ಕರ ಸ್ವಾಗತಿಸಿ, ವಂದಿಸಿದರು.