

ದೇವದುರ್ಗ: ತಾಲೂಕಿನ ಐತಿಹಾಸಿಕ ಗಬ್ಬೂರು ಶ್ರೀ ಬೂದಿಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು ದಾಂಪತ್ಯ ಜೀವನಕ್ಕೆ ಕಾಲಿಡುವ ಆಸಕ್ತ ವಧು-ವರರು ಹಾಗೂ ಪಾಲಕರು ನೋಂದಣಿ ಮಾಡಿಕೊಳ್ಳಬಹುದು ಎಂದು ದೇವಸ್ಥಾನ ಸಮಿತಿ ಆಡಳಿತಾಧಿಕಾರಿ ಚನ್ನಬಸಯ್ಯಸ್ವಾಮಿ ತಿಳಿಸಿದ್ದಾರೆ.
ಶ್ರೀ ಬೂದಿಬಸವ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಫೆ.9ರಂದು ಜಾತ್ರಾ ಮಹೋತ್ಸವ ಹಾಗೂ ಫೆ.6ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಎಸ್ಸಿ, ಎಸ್ಟಿ ದಂಪತಿಗೆ 50ಸಾವಿರ ರೂ. ಹಾಗೂ ಸಾಮಾನ್ಯ ದಂಪತಿಗೆ 10ಸಾವಿರ ರೂ. ಸರ್ಕಾರದಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ.
ಆಸಕ್ತರು ಅಗತ್ಯ ದಾಖಲೆಯೊಂದಿಗೆ ಜ.31ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ ಮೊಬೈಲ್ ಸಂಖ್ಯೆ 6361775778, 8762592586, 9611838006ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಳಿಸಲಾಗಿದೆ.