ನಾಪೋಕ್ಲು ಭಾಗದ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

17-npk--1
ನಾಪೋಕ್ಲು ಪಟ್ಟಣದ ಮುಯ್ಯದ್ದಿನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು.
Published on

ನಾಪೋಕ್ಲು: ನಾಪೋಕ್ಲು ಸೇರಿದಂತೆ ವಿವಿಧೆಡೆ ತ್ಯಾಗ ಬಲಿದಾನದ ಸಂದೇಶ ಸಾರುವ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಶ್ರದ್ಧಾಭಕ್ತಿಯಿಂದ ಸಡಗರದಿಂದ ಸೋಮವಾರ ಆಚರಿಸಿದರು.
ಪಟ್ಟಣದ ಮುಯ್ಯದ್ದಿನ್ ಜುಮ್ಮಾ ಮಸೀದಿಯಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಧರ್ಮ ಗುರು ಅಶ್ರಫ್ ಅನ್ಸಾರಿ ವಿಶೇಷ ಪ್ರಾರ್ಥನೆ ನೆರವೇರಿಸಿ, ಹಬ್ಬದ ಮಹತ್ವ ಹಾಗೂ ಧರ್ಮ ಸಂದೇಶ ನೀಡಿ ಶುಭ ಹಾರೈಸಿದರು. ಜಮಾತ್ ಆಡಳಿತ ಮಂಡಳಿ ಅಧ್ಯಕ್ಷ ಎಂ.ಎಚ್.ಅಬ್ದುಲ್ ರೆಹಮಾನ್, ಉಪಾಧ್ಯಕ್ಷ ಬದ್ರುದ್ದೀನ್, ಕಾರ್ಯದರ್ಶಿ ಯೂನಸ್, ಮಾಜಿ ಅಧ್ಯಕ್ಷ ಸಲೀಂ ಹ್ಯಾರಿಸ್, ಮಾಜಿ ಉಪಾಧ್ಯಕ್ಷ ರಶೀದ್, ಮಾಜಿ ಕಾರ್ಯದರ್ಶಿ ಅಹಮದ್ ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಅಲ್ಲದೆ ಎಮ್ಮೆಮಾಡು, ಪಡಿಯಾಣಿ, ಕುಂಜಿನ, ಕೊಟ್ಟಮುಡಿ, ಎಡಪಾಲ, ಕಿಕ್ಕೆರೆ, ಹಳೆ ತಾಲೂಕು, ಕೊಟ್ಟಮುಡಿ ಸೇರಿದಂತೆ ವಿವಿಧ ಮಸೀದಿಗಳಲ್ಲಿ ನಮಾಜ್, ಪ್ರಾರ್ಥನೆಯೊಂದಿಗೆ ಆಡಳಿತ ಮಂಡಳಿ ಪದಾಧಿಕಾರಿಗಳು ಬಕ್ರೀದ್ ಹಬ್ಬವನ್ನು ಆಚರಿಸಿದರು. ಈ ಸಂದರ್ಭ ಹೊಸ ಬಟ್ಟೆ ಧರಿಸಿದ ಮುಸ್ಲಿಮರು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net