ಸಾಮೂಹಿಕ ಸತ್ಯನಾರಾಯಣ ಪೂಜೆ

08sunti06
Published on

ಸುಂಟಿಕೊಪ್ಪ: ಮಹಾಶಿವರಾತ್ರಿ ಅಂಗವಾಗಿ ಶುಕ್ರವಾರ ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿದವು.
ಕಂಬಿಬಾಣೆ ಗ್ರಾಮದ ಶ್ರೀರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿತ್ತು. ಪ್ರಧಾನ ಅರ್ಚಕ ಪ್ರಭಾಕರ್ ಕುದ್ದಣ್ಣಯ್ಯ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಮಹಾಮಂಗಳಾರತಿ ಬಳಿಕ ಭಕ್ತರಿಗೆ ತೀರ್ಥಪ್ರಸಾದ ಹಾಗೂ ಅನ್ನಸಂತರ್ಪಣೆ ಮಾಡಲಾಯಿತು.
ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ್ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್, ಸಮಿತಿ ಪದಾಧಿಕಾರಿಗಳಾದ ಜಯಂತ್, ರವಿ, ಸುಬ್ರಯ, ಚಿದಾನಂದ, ಗಂಗಾಧರ, ಮಂಜುನಾಥ್ ರೈ ಇತರರು ಹಾಜರಿದ್ದರು. ಸುಂಟಿಕೊಪ್ಪ, ಕೊಡಗರಹಳ್ಳಿ, ಪನ್ಯ, ಉಪ್ಪುತೋಡು, ಕಂಬಿಬಾಣೆ, ಕುಶಾಲನಗರದಿಂದ ಭಕ್ತರು ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದರು.
ಸಮೀಪದ ಕೊಡಗರಹಳ್ಳಿ, ಶ್ರೀ ಬೈತೂರಪ್ಪ ಪೊವ್ಚದಿ, ಬಸವೇಶ್ವರ ದೇವಾಲಯ, ಕಂಬಿಬಾಣೆ ಮ್ಯಾಗಡೂರ್ ವಿಶ್ವನಾಥ ದೇವಾಲಯ, ನಾಕೂರು ಶಿವ ದೇವಾಲಯ, ಕೆದಕಲ್ ಭದ್ರಕಾಳಿ ದೇವಾಲಯಗಳಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net