

ಬೀರೂರು: ಪಟ್ಟಣದ ಕರಗಲ್ ಬೀದಿಯ ಶ್ರೀ ಬೇಟೆ ರಂಗನಾಥಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಮೂರನೇ ಶನಿವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು.
ಪಟ್ಟಣದ ಗಂಗಾಮತಸ್ಥರ ಸಮಾಜದಿಂದ ಲೋಕ ಕಲ್ಯಾಣಾರ್ಥ ನಡೆದ ಧಾರ್ಮಿಕ ಕಾರ್ಯದಲ್ಲಿ ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು. ಅರ್ಚಕ ರಾಜಗೋಪಾಲಾಚಾರ್ ನೇತೃತ್ವದಲ್ಲಿ ದೇವರ ಸನ್ನಿಧಿಯಲ್ಲಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಮುಂಭಾಗದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿಯನ್ನು ಪ್ರತಿಸ್ಠಾಪಿಸಲಾಯಿತು. ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಸಂಜೆ ಶ್ರೀ ಭೋಗಮಲ್ಲೇಶ್ವರ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ಜರುಗಿತು