ಸಾಮೂಹಿಕ ವಿವಾಹ ಮೇ 4ಕ್ಕೆ

New pm 2 New
Published on

ಹುಬ್ಬಳ್ಳಿ : ಇಲ್ಲಿನ ನವಯುಗ ಸಂಘಟನೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮವನ್ನು ಮೇ 4ರಂದು ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ಎದುರಿನ ಸಂತೆ ಮೈದಾನದಲ್ಲಿ ಆಯೋಜಿಸಲಾಗಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘಟನೆ ಅಧ್ಯಕ್ಷ ಕೃಷ್ಣಾ ಗಂಡಗಾಳೇಕರ, ಬೆಳಗ್ಗೆ ಸಾಮೂಹಿಕ ಉಪನಯನ, ನಂತರ ಸಾಮೂಹಿಕ ವಿವಾಹ ಜರುಗಲಿದೆ ಎಂದು ಹೇಳಿದರು.

ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಗೌರಿಗದ್ದೆ ಆಶ್ರಮದ ಶ್ರೀ ವಿನಯ ಗುರೂಜಿ, ಹುಬ್ಬಳ್ಳಿ ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಸಗಂದೂರು ಶ್ರೀ ಚೌಡೇಶ್ವರ ಅಮ್ಮನವರ ದೇವಸ್ಥಾನದ ಧರ್ಮಾಧಿಕಾರಿ ಡಾ. ರಾಮಪನ್ನವರ ಅವರು ಸಾನ್ನಿಧ್ಯ ವಹಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ್, ಮೇಯರ್ ರಾಮಪ್ಪ ಬಡಿಗೇರ, ಉಪ ಮೇಯರ್ ದುರ್ಗಮ್ಮ ಬಿಜವಾಡ ಹಾಗೂ ಮತ್ತಿತರರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಪ್ರಕಾಶ ಕ್ಯಾರಕಟ್ಟಿ, ರವಿ ನಾಯ್ಕ, ನಾಗರಾಜ ಕಲಾಲ, ಸುಬ್ರಮಣ್ಯ ಶಿರಕೋಳ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net