ಜು.30ರಿಂದ ನಗರದಲ್ಲಿ ಬೃಹತ್ ರಕ್ತದಾನ ಶಿಬಿರ: ಸಂಚಾಲಕ ಎನ್.ಎಸ್.ನವೀನ್‌ಕುಮಾರ್ ಮಾಹಿತಿ

1 (1)
Published on

ಮಂಡ್ಯ: ಕಾರ್ಗಿಲ್ ವಿಜಯೋತ್ಸವದ ನೆನಪಿಗಾಗಿ ನಗರದಲ್ಲಿ ರಾಷ್ಟ್ರವಿಕಾಸ ಚಾರಿಟಬಲ್ ಟ್ರಸ್ಟ್‌ನಿಂದ ಜು.30ರಂದು ಬೃಹತ್ ರಕ್ತದಾನ ಮತ್ತು ನೇತ್ರದಾನ ಶಿಬಿರ ಆಯೋಜಿಸಲಾಗಿದೆ ಎಂದು ಸಂಚಾಲಕ ಎನ್.ಎಸ್.ನವೀನ್‌ಕುಮಾರ್ ತಿಳಿಸಿದರು.

ಜಿಲ್ಲಾ ಮಾಜಿ ಸೈನಿಕರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಶಿಬಿರಕ್ಕೆ ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಾಲನೆ ನೀಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಲ್ಲರಾಜು, ನಿವೃತ್ತ ಸೈನಿಕ ಶ್ರೀನಿವಾಸ್ ಭಾಗವಹಿಸುವರು. 500ಕ್ಕೂ ಹೆಚ್ಚು ಜನರು ರಕ್ತದಾನ ಹಾಗೂ ನೂರಕ್ಕೂ ಹೆಚ್ಚು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಸುವ ಗುರಿಯನ್ನು ಟ್ರಸ್ಟ್ ಹೊಂದಿದೆ. ಇದೇ ವೇಳೆ ಪೌರಕಾರ್ಮಿಕರನ್ನು ಸನ್ಮಾನಿಸಲಾಗುವುದು. ಸಂಜೆ 5ಗಂಟೆಗೆ ಮೇಜರ್ ಬಿ.ಅಶ್ವಥ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗವಹಿಸುವರು ಎಂದು ವಿವರಿಸಿದರು.

ಯುವ ಬ್ರಿಗೇಡ್‌ನ ಸಂಚಾಲಕ ಯೋಗೇಶ್, ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಮಲ್ಲರಾಜು, ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್, ಮುಖಂಡ ಶಶಿಕುಮಾರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net