28ಕ್ಕೆ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ptotest
ptotest
Published on

ಕುಂದಾಪುರ: ಜಿಲ್ಲೆಯಲ್ಲಿ ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ವಾಡುವ ಮೂಲಕ ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ಸರ್ಕಾರದ ಕಣ್ಣು ತೆರೆಸುವ ಕೆಲಸ ಆಗಬೇಕಾಗಿದೆ. ನಮೂನೆ 9/11 ನೀಡುವ ಅಧಿಕಾರ ಈ ಹಿಂದೆ ಇದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ನೀಡಬೇಕಿದ್ದು, ಕಾಂಗ್ರೆಸ್ ಸರ್ಕಾರದಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪಕ್ಷದ ಎಲ್ಲ ಪದಾಧಿಕಾರಿಗಳು ಅಣಿಯಾಗಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆ ವಿರುದ್ಧ ಬಿಜೆಪಿ ವತಿಯಿಂದ ಜು.28ಕ್ಕೆ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಶಾಸಕ ಎ.ಕಿರಣ್ ಕುವಾರ್ ಕೊಡ್ಗಿ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಗಿರೀಶ್ ಅಂಚನ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ಶೆಣೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಉಪಸ್ಥಿತರಿದ್ದರು. ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net