

ಮಡಿಕೇರಿ: ಮೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ವಾಮಮಾರ್ಗದ ಮೂಲಕ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಾಜ್ಯಪಾಲರು, ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಮಾದ್ಯಮ ವಕ್ತಾರ ಟಿ.ಪಿ.ರಮೇಶ್, ಡಿಸಿಸಿ ಪ್ರದಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮ್ಮದ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಸಾಮಾಜಿಕ ಜಾಲತಾಣ ಅಧ್ಯಕ್ಷ ಹೊಸೂರು ಸೂರಜ್, ಬ್ಲಾಕ್ ಅಧ್ಯಕ್ಷರು, ಘಟಕಗಳ ಅಧ್ಯಕ್ಷರು, ಕಾರ್ಯಕರ್ತರು ಪಾಲ್ಗೊಂಡಿದ್ದರು.