ವೈದ್ಯೆಯ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

17 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೊಲ್ಕತ್ತಾದಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿರುವುದನ್ನು ಖಂಡಿಸಿ ಎಐಎಂಎಸ್‌ಎಸ್, ಎಐಡಿವಐಒ, ಎಐಡಿಎಸ್‌ಒ ಸಂಘಟನೆಗಳಿ0ದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಕಲಾಭವನ ಮೈದಾನದಿಂದ ವಿವೇಕಾನಂದ ವೃತ್ತದವರೆಗೆ ರ‍್ಯಾಲಿ ನಡೆಸಿದರು. ಈ ವೇಳೆ ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಗಂಗೂಬಾಯಿ ಕೋಕರೆ ಮಾತನಾಡಿ, ಕೊಲ್ಕತ್ತಾದ ಘಟನೆ ಕೆಲಸದ ಸ್ಥಳಗಳಲ್ಲಿ ಮಹಿಳೆಯ ಸುರಕ್ಷತೆಯ ಪ್ರಶ್ನೆಯನ್ನು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಕೃತ್ಯ ಎಸಗಿಸುವ ಅಪರಾಽಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಉದ್ದೇಶಪೂರ್ವಕ ಮತ್ತು ವ್ಯವಸ್ಥಿತ ದಾಳಿ ಖಂಡನೀಯ. ಆಸ್ಪತ್ರೆಯ ಅಽಕಾರಿಗಳು ಆರೋಪಿಗಳೊಂದಿಗೆ ಶಾಮೀಲಾಗಿದ್ದು, ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದು ಶೋಚನೀಯ ಎಂದರು.
ಎಐಡಿವೈಒ ಜಿಲ್ಲಾಧ್ಯಕ್ಷ ಭವಾನಿಶಂಕರ್ ಗೌಡ ಮಾತನಾಡಿ, ಯುವಜನರು ಅನ್ಯಾಯದ ವಿರುದ್ಧ ಧ್ವನಿ ಎತ್ತದಂತೆ ಅವರ ನೈತಿಕ ಬೆನ್ನೆಲುಬನ್ನು ಮುರಿಯಲಾಗುತ್ತಿದೆ. ವಿಕೃತ ಮನಸ್ಥಿತಿ ಬೆಳೆಸಿಕೊಂಡು ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ಅತ್ಯಾಚಾರದಂಥ ಹೀನ, ಅನಾಗರಿಕ, ಅಮಾನವೀಯ ಕೃತ್ಯ ನಡೆಯುತ್ತಿವೆ. ದೆಹಲಿಯ ನಿರ್ಭಯಾ ಪ್ರಕರಣದ ನಂತರ ಮಹಿಳೆಯರ ಮೇಲಿನ ಅಪರಾಧ ತಡೆಗಟ್ಟಲು ರಚಿತ ವರ್ಮಾ ಆಯೋಗ ಹಲವಾರು ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿಲ್ಲ ಎಂದರು.
ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ಮಧುಲತಾ ಗೌಡರ, ಸಿಂಧು ಕೌದಿ, ರಣಜಿತ್ ದೂಪದ್, ದೇವಮ್ಮ ದೇವತ್ಕಲ್, ಪ್ರೀತಿ ಸಿಂಗಾಡಿ, ಸೂರ್ತಿ ಚಿಕ್ಕಮಠ, ಪವಿತ್ರಾ, ಸಿಮೋನ್ ಸೂರ್ಯವಂಶಿ, ಶಾಂತೇಶ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net