

ವಿಜಯಪುರ : ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಅನ್ಯಾಯ ಮಾಡುತ್ತಿರುವ ಧೋರಣೆ ಖಂಡಿಸಿ ವಾಲ್ಮೀಕಿ ಎಸ್ಟಿ ಸಮುದಾಯದ ವತಿಯಿಂದ ಸೆ. 16 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ವಿವಿಧ ಬೃಹತ್ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ಹಿನ್ನೆಲೆಯಲ್ಲಿ ಎಸ್ಟಿ ಜನಾಂಗದವರು ಪ್ರತಿಭಟನಾ ಮೆರವಣಿಗೆ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.