

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸಮಗ್ರ ಅಭಿವೃದ್ಧಿ ಕುರಿತು ನೀಲನಕ್ಷೆ ಸಿದ್ಧಪಡಿಸಲು ಪೂರಕ ಮಾಹಿತಿಗಳನ್ನು ಸಂಗ್ರಹಿಸಿ, ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸಮಗ್ರ ಅಭಿವೃದ್ಧಿ (ಟೌನ್ ಪ್ಲಾನಿಂಗ್) ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಲ್ಲಿ ಬುಧವಾರದಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಗತ್ಯ ಸೂಚನೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ರಾಜ್ಯದ ಎರಡನೇ ರಾಜಧಾನಿಯಂದೇ ಬಿಂಬಿತವಾಗಿದೆ. ಅತಿ ವೇಗವಾಗಿ ಬೆಳೆಯುತ್ತಿರುವ ಮಹಾನಗರಗಳಲ್ಲಿ ಒಂದಾಗಿದೆ. ಮಹಾನಗರವನ್ನು ಇನ್ನಷ್ಟು ಸುಂದರ ಮತ್ತು ಮಾದರಿಯಾಗಿಸುವ ಅವಶ್ಯಕತೆ ಇದ್ದು, ಮಾಸ್ಟರ್ ಪ್ಲಾನ್ ಅಗತ್ಯವಿದೆ. ಹೀಗಾಗಿ, ಹು-ಧಾ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ನಿಗದಿ ಪಡಿಸಿದ ಸಂಸ್ಥೆಗಳಿಗೆ ಸಮಗ್ರ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಯುಜಿಡಿ, ಘನತ್ಯಾಜ್ಯ ವಿಲೇವಾರಿ, ಕುಡಿಯುವ ನೀರಿನ ಸಂಸ್ಕರಣಾ ಘಟಕ, ಹಸರೀಕರಣ, ಕೊಳಗೇರಿಗಳ(ಸ್ಲಮ್ ಅಭಿವದ್ಧಿ ಮಾಡುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಚಿವ ಖರ್ಗೆ ರ್ಚಚಿಸಿದರು.
ಈಗಾಗಲೇ ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಸಮೀಕ್ಷೆ ಕೈಗೊಂಡು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ಹು-ಧಾ ಅವಳಿ ನಗರದ ಅಭಿವೃದ್ಧಿಗೆ ಗುರುತು ಪಡಿಸಿದ ಸಂಸ್ಥೆಗಳಿಗೆ ಅವಶ್ಯವಿರುವ ಮಾಹಿತಿ ನೀಡಿ, ವಿಸõತ ಯೋಜನಾವರದಿ ಸಲ್ಲಿಸಲು ಅಧಿಕಾರಿಗಳಿಗೆ ಹೇಳಿದರು.
ಶಾಸಕ, ಸ್ಲಮ್ ಬೋರ್ಡ್ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಮಾತನಾಡಿ, ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರವು ನಿಗದಿತ ಅವಧಿಯೊಳಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹ್ಯುಮನ್ ಸೆಟ್ಲಮೆಂಟ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಹಕರಿಸಿ, ಅವಳಿ ನಗರದ ಮಾಸ್ಟರ್ ಪ್ಲಾನ್ ಸಿದ್ಧ ಪಡಿಸಲು ಅಗತ್ಯ ಮಾಹಿತಿ ನೀಡುವಂತೆ ಸೂಚಿಸಿದರು.
ಹುಡಾ ಆಯುಕ್ತ ಸಂತೋಷ ಬಿರಾದಾರ, ಪಾಲಿಕೆ ಅಧೀಕ್ಷ ಇಂಜನಿಯರ್ ವಿಜಯ ಕುಮಾರ, ಟೌನ್ ಪ್ಲಾನರ್ ಮುಧೋಳಕರ್, ಇಂಡಿನ್ ಇನ್ಸ್ಟಿಟ್ಯೂಟ್ ಆಫ್ ಹ್ಯುಮನ್ ಸೆಟ್ಲಮೆಂಟ್ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.