ಜ.10ರಿಂದ 12ರವರೆಗೆ ಸೌತ್ ಇಂಡಿಯಾ ಮಾಸ್ಟರ್ಸ್‌ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್

rrrrrrrr
Published on



ಮಂಗಳೂರು : ಸೌತ್ ಇಂಡಿಯಾ ಮಾಸ್ಟರ್ಸ್‌ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಸೌತ್ ಇಂಡಿಯಾ ಮಾಸ್ಟರ್ಸ್‌ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಜ.10ರಿಂದ 12ರವರೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ. ದೇಶ ವಿದೇಶದ ಸುಮಾರು 2000 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಭಾಗವಹಿಸುವ ಸುಮಾರು 500 ಕ್ರೀಡಾಪಟುಗಳಿಗೆ ಉಚಿತ ವಸತಿ ಹಾಗೂ ಎಲ್ಲ ಕ್ರೀಡಾಪಟುಗಳಿಗೆ ಉಪಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆಯ ಪೂರ್ವ ತಯಾರಿಯನ್ನು ಈಗಾಗಲೇ ಮಾಡಲಾಗಿದೆ ಎಂದು ಸೌತ್ ಇಂಡಿಯಾ ಮಾಸ್ಟರ್ಸ್‌ ಅಥ್ಲೆಟಿಕ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಸುರೇಂದ್ರ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜ.10ಕ್ಕೆ ಬೆಳಗ್ಗೆ 7ಕ್ಕೆ ಸ್ಪರ್ಧೆಗಳು ಆರಂಭಗೊಳ್ಳಲಿದೆ. ಒಟ್ಟು 12 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ
ಸ್ಪೀಕರ್ ಯು.ಟಿ.ಖಾದರ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ದೀಪ ಬೆಳಗಿಸಿ ಕ್ರೀಡಾ ಪ್ರಮಾಣ ವಚನದ ಮೂಲಕ ಚಾಲನೆ ನೀಡಲಿದ್ದಾರೆ. ಎಂಎಲ್‌ಸಿ ಐವನ್ ಡಿಸೋಜಾ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಬಿ.ಎ., ಸಹ ಖಜಾಂಜಿ ಅನ್ವರ್ ಇಬ್ರಾಹಿಂ, ಸಮಿತಿ ಸದಸ್ಯ ರವಿರಾಜ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net