ವಸ್ತು ಪ್ರದರ್ಶನ ವೈವಿಧ್ಯಮಯವಾಗಿರಲಿ: ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ ಸಲಹೆ

Material Display Committee Meeting Mandya
Published on

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯುವ ವಸ್ತು ಪ್ರದರ್ಶನ ಮಳಿಗೆಗಳು ವೈವಿಧ್ಯಮಯವಾಗಿರಲಿ. ಮಾತ್ರವಲ್ಲದೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತಿರಲಿ ಎಂದು ವಸ್ತು ಪ್ರದರ್ಶನ ಸಮಿತಿ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮ್ಮೇಳನದ ವಸ್ತು ಪ್ರದರ್ಶನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು. ಇಲಾಖೆಗಳಿಂದ ಪ್ರತಿನಿಧಿಸುವ ವಸ್ತು ಪ್ರದರ್ಶನ ಮಳಿಗೆಗಳು ಪರಿಣಾಮಕಾರಿಯಾಗಿ ವಿನ್ಯಾಸಗೊಳಿಸಿ. ಒಂದೇ ರೀತಿಯ ಬದಲು ವೈವಿಧ್ಯಮಯವಾಗಿರಲಿ ಎಂದು ಸಲಹೆ ನೀಡಿದರು.

ಪ್ರತಿಯೊಂದು ಇಲಾಖೆಯು ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಿ. ಮಳಿಗೆಗಳು ವಿನೂತನ, ಪರಿಣಾಮಕಾರಿಯಾಗಿ ಸ್ಥಾಪಿಸುವ ಸಂಬಂಧ ಚರ್ಚೆ ಮಾಡಬೇಕು. ಎಲ್ಲರೂ ಸಮ್ಮೇಳನದ ಯಶಸ್ವಿಗೆ ಸಹಕರಿಸಬೇಕು. ಪ್ರತಿ ಇಲಾಖೆಯು ಯಾವ ರೀತಿಯ ಮಳಿಗೆಗಳನ್ನು ಸ್ಥಾಪಿಸಬೇಕು ಎಂದು ಚರ್ಚಿಸಬೇಕು ಎಂದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ, ಜಂಟಿ ಕೃಷಿ ನಿರ್ದೇಶಕ ಡಾ.ವಿ.ಎಸ್.ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ, ಚೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಎಸ್.ಅನಿತಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಸುರೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಸಿದ್ದಲಿಂಗೇಶ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net