ಪ್ರಾಥಮಿಕ ಶಾಲೆಗಳಲ್ಲಿ ಗಣಿತ ಸ್ಪರ್ಧೆ

25adarshkdga1
Published on

ಮಡಿಕೇರಿ: ಹಾಲುಗುಂದ ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಅಕ್ಷರ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಗಣಿತ ಸ್ಪರ್ಧೆಯನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.


ಹಾಲುಗುಂದ, ಕೊಂಡಂಗೇರಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎಲಿಯಂಗಾಡು, ಬೈರಂಬಾಡ ಶಾಲಾ ಮಕ್ಕಳಿಗೆ ಆಯಾ ಶಾಲೆಗಳಲ್ಲಿ ಏರ್ಪಡಿಸಲಾಗಿತ್ತು. ಗಣಿತ ಸ್ಪರ್ಧೆಯ ೪ನೇ ತರಗತಿ ವಿಭಾಗದಲ್ಲಿ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಂಜು(ಪ್ರ), ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎಲಿಯಂಗಾಡು ಸಾರ (ದ್ವಿ) ಹಾಗೂ ಮುಫೀದ ತೃತೀಯ ಸ್ಥಾನವನ್ನು ಪಡೆದಿದ್ದಾರೆ.


೫ನೇ ತರಗತಿ ವಿಭಾಗದಲ್ಲಿ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೋಕ್ಷಿತ್(ಪ್ರ), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಂಗೇರಿಯ ಮೊಹಮ್ಮದ್ ಮಿದಿಲಾಜ್(ದ್ವಿ), ಎಲಿಂಗಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಎಂ.ಕದೀಜ ತೃತೀಯ ಸ್ಥಾನವನ್ನು ಪಡೆದಿದ್ದಾರೆ.


೬ನೇ ತರಗತಿ ವಿಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಂಗೇರಿಯ ಎಚ್.ಎಂ.ಶೈಮಾ(ಪ್ರ) ಹಾಗೂ ಫಾತಿಮತ್ ತಶ್ರೀಫ್(ದ್ವಿ), ಪಿ.ಎಸ್.ಫಿದಾ ತೃತೀಯ ಸ್ಥಾನ ಪಡೆದರು.ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಅಭಿನಂದನಾ ಪತ್ರವನ್ನು ನೀಡಲಾಯಿತು.


ಹಾಲುಗುಂದ ಗ್ರಾ.ಪಂ. ಅಧ್ಯಕ್ಷೆ ಸೀತಮ್ಮರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷ ದಿನೇಶ್, ಅಭಿವೃದ್ಧಿ ಅಧಿಕಾರಿ ಕಾಂಚನ, ಸದಸ್ಯರುಗಳಾದ ಪೂವಯ್ಯ, ಸ್ಮಿತಾ, ಆಮಿನ, ಹನೀಫ್, ಅದ್ರಮಾನ್, ರಮ್ಲತ್, ಕಾರ್ಯದರ್ಶಿ ಕವಿತಾ, ಪಂಚಾಯಿತಿ ಸಿಬ್ಬಂದಿಗಳು ಹಾಗೂ ಕೊಂಡಂಗೇರಿ ಶಾಲಾ ಮುಖ್ಯ ಶಿಕ್ಷಕ ರವಿಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net