

ಬೆಳ್ತಂಗಡಿ: ಕಾಲೇಜಿನ ಗಣಿತ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ(ಐಕ್ಯುಎಸಿ) ವತಿಯಿಂದ ಮಣಿಪಾಲದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದಲ್ಲಿ ಉಜಿರೆಯ ಶ್ರೀ ಧ.ಮಂ ಕಾಲೇಜಿನಲ್ಲಿ ಕಂಪ್ಯೂಟೇಶನಲ್ ಗಣಿತಶಾಸ್ತ್ರ ಕುರಿತು ಒಂದು ದಿನದ ರಾಷ್ಟ್ರೀಯ ಸೆಮಿನಾರ್ ಗುರುವಾರ ನಡೆಯಿತು.
ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಣಿತವು ಜಗತ್ತನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಹಕಾರಿಯಾಗಿದೆ ಎಂದರು.
ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣಿತವು ಪ್ರತ್ಯೇಕವಾದ ವಿಷಯವಲ್ಲ. ಅದು ಪ್ರತಿಯೊಂದಕ್ಕೂ ಅನ್ವಯವಾಗುತ್ತದೆ. ವೈದ್ಯಕೀಯ ಕ್ಷೇತ್ರದಲ್ಲೂ ಗಣಿತವನ್ನು ಅನ್ವಯಿಸಲಾಗುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಡಾ.ಇಂದಿರಾ ಕೆ.ಪಿ., ಡಾ.ಬಿ.ರಮೇಶ ಶಂಕರ್, ಡಾ.ಮಹೇಶ್ ಕುಮಾರ್ ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.
ಗಣಿತ ವಿಭಾಗ ಮುಖ್ಯಸ್ಥ ಬಿ.ಗಣೇಶ್ ನಾಯಕ್ ಸ್ವಾಗತಿಸಿದರು. ಅಕ್ಷತಾ ಬಿ. ವಂದಿಸಿದರು. ಪೂಜಿತ ವರ್ಮ ಜೈನ್ ಕಾರ್ಯಕ್ರಮ ನಿರೂಪಿಸಿದರು.