

ಮೈಸೂರು: ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸ್ನಾತಕ ಗಣಿತಶಾಸ್ತ್ರ ವಿಭಾಗದ ವತಿಯಿಂದ ಸಮಕಾಲೀನ ಜಗತ್ತಿನಲ್ಲಿ ಗಣಿತಶಾಸ್ತ್ರದ ಅನ್ವಯಗಳು- ಗ್ರಾಫ್ ಥಿಯರಿ ಮತ್ತು ಡಿಫರೆನ್ಶಿಯಲ್ ಸಮೀಕರಣಗಳ ದೃಷ್ಟಿಕೋನ ವಿಷಯದ ಕುರಿತು ಶುಕ್ರವಾರ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.
ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಆರ್. ನಾಯಕ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಡಾ. ಎಂ. ಪ್ರಭು, ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕರಾದ ಪ್ರೊ. ಬಿ.ವಿ. ಸಾಂಬಶಿವಯ್ಯ ಅಧ್ಯಕ್ಷತೆ ವಹಿಸಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಲಿಂಗಣ್ಣ ಹಾಗೂ ಇತರರು ಇದ್ದರು.