ಮಟ್ಟಾರ್ ವಿಠಲ ಕಿಣಿಗೆ ಜಿಲ್ಲಾಡಳಿತದಿಂದ ಸನ್ಮಾನ

mng-aug9-vital kinni
Published on

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೇನ್‌ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಗೌರವಿಸಲಾಯಿತು.


ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಿಣಿ ಅವರನ್ನು ಸನ್ಮಾನಿಸಿದರು. ಸ್ವಾರ್ಥ ಬಿಟ್ಟು ದೇಶಕ್ಕಾಗಿ ಹೋರಾಟ ಮಾಡಿದ ಮಹನೀಯರ ಸ್ಮರಣೆ ಅವಶ್ಯ. ಸಾವಿರಾರು ಮಂದಿ ಹೋರಾಟ ಮಾಡಿದ್ದಾರೆ. ಮಟ್ಟಾರ್ ವಿಠಲ ಕಿಣಿಯವರಲ್ಲಿ ಅವರೆಲ್ಲರ ಹೋರಾಟ ಮತ್ತು ತ್ಯಾಗದ ದರ್ಶನವಾಗುತ್ತದೆ. ಡ್ರಗ್ಸ್ ಅಭಿಯಾನದ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಕಿಣಿ ಅವರ ಆದರ್ಶ, ಮಕ್ಕಳಿಗೆ ಮಾರ್ಗದರ್ಶನ ಅಗತ್ಯವಿದೆ ಎಂದರು.


ಸನ್ಮಾನಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಕಿಣಿ ಅವರು, ದೇಶಕ್ಕೆ ಜೈಕಾರ ಕೂಗಿದರು. ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net