ಮಟ್ಟಿ ಬಸವೇಶ್ವರ ಉತ್ಸವ

MATTI
Published on

ಚಿತ್ರದುರ್ಗ: ತಾಲೂಕಿನ ಕ್ಯಾದಿಗೆರೆ ಗ್ರಾಮದಲ್ಲಿ ಸೆ.10, 11ರಂದು ಮಟ್ಟಿ ಬಸವೇಶ್ವರ ಜಾತ್ರೆ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಭಾನುವಾರ ಆಂಜನೇಯ ಸ್ವಾಮಿ ದೇವರ ಮೆರವಣಿಗೆ, ಸೋಮವಾರ ಬೆಳಗ್ಗೆ ಮಟ್ಟಿ ಬಸವೇಶ್ವರ ಸ್ವಾಮಿಗೆ ಕುಂಭಾಭಿಷೇಕ, ಹೂವಿನ ಅಲಂಕಾರ, 11 ಗಂಟೆಗೆ ಮಹಾಮಂಗಳಾರತಿ, ಅನ್ನಸಂತರ್ಪಣೆ ಆಯೋಜಿಸಲಾಗಿದೆ.

ಮಧ್ಯಾಹ್ನ 12 ಗಂಟೆ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು. ದೊಡ್ಡಸಿದ್ದವ್ವನಹಳ್ಳಿ ಗ್ರಾಪಂ ವ್ಯಾಪ್ತಿಯ ಕೆಲಸ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಐಮಂಗಲ: ವರುಣನ ಕೃಪೆಗಾಗಿ ಹೋಬಳಿಯ ವದ್ದಿಕೆರೆ ಗ್ರಾಮದ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸೆ.11ರಂದು ರುದ್ರಾಭಿಷೇಕ, ವರುಣ ಜಪ, ಹೋಮ, ವಿರಾಟ ಪರ್ವ ಪಾರಾಯಣ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net