

ಉಡುಪಿ: ಮಟ್ಟು ಗುಳ್ಳ ಬೆಳೆಗಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೋದೆ ಶ್ರೀವಾದಿರಾಜ ಮಠದ ಪೀಠಾಧಿಪತಿ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಶ್ರೀಮಠದ ವತಿಯಿಂದ ಮಟ್ಟುಗುಳ್ಳ ಕೃಷಿಗೆ ಮುಂದಾಗಿದ್ದು, ಮಟ್ಟು ಗ್ರಾಮದ ನಾಗಪಾತ್ರಿ ಲಕ್ಷ್ಮಣ ರಾಯರ ಗದ್ದೆಯಲ್ಲಿ ಮಟ್ಟು ಗುಳ್ಳದ ಸಸಿಯನ್ನು ನೆಟ್ಟು ಪ್ರಸಕ್ತ ಸಾಲಿನ ಗುಳ್ಳದ ಬೆಳೆಗೆ ಶುಕ್ರವಾರ ಬೆಳಗ್ಗೆ ಚಾಲನೆ ನೀಡಿದರು.
ಸೋದೆ ಮಠದ ಶ್ರೀವಾದಿರಾಜ ಗುರುಗಳು 500 ವರ್ಷದ ಹಿಂದೆ ಉಡುಪಿ ಸಮೀಪದ ಮಟ್ಟು ಗ್ರಾಮದವರಿಗೆ ಶ್ರೀಹಯಗ್ರೀವ ದೇವರ ಪ್ರೇರಣೆಯಿಂದ ಗುಳ್ಳದ ಬೀಜವನ್ನು ಕೊಟ್ಟು ಮಟ್ಟು ಗುಳ್ಳ"ವನ್ನು ಪ್ರಪಂಚಕ್ಕೆ ಪರಿಚಯಿಸಿದ್ದಾರೆ. ಔಷಧೀಯ ಗುಣವುಳ್ಳ ಮಟ್ಟು ಗುಳ್ಳವನ್ನು ಗ್ರಾಮದ ಅನೇಕ ಕೃಷಿಕರು ಇಂದಿಗೂ ಬೆಳೆಸಿ ಉಳಿಸಿಕೊಂಡು ಬಂದಿದ್ದಾರೆ.
ಮಠದ ದಿವಾನ ಪಾಡಿಗಾರು ಶ್ರೀನಿವಾಸ ತಂತ್ರೀ , ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟಿನ ಕಾರ್ಯದರ್ಶಿ ರತ್ನಕುಮಾರ್, ಗ್ರಾಮಸ್ಥರು ಉಪಸ್ಥಿತರಿದ್ದರು.