ಮಾವಿನ ಇಟಗಿಯಲ್ಲಿ ಪ್ರೌಢಶಾಲೆ ಆರಂಭಿಸಿ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರಗೆ ಗ್ರಾಮಸ್ಥರ ಮನವಿ

260722 Mavinaitagi Villagers Appeal
ಮಾವಿನಇಟಗಿಯಲ್ಲಿ ಪ್ರೌಢಶಾಲೆ ಆರಂಭಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರಗೆ ಭಾನುವಾರ ಮನವಿ ಸಲ್ಲಿಸಿದರು.
Published on

ಹನುಮಸಾಗರ: ಸಮೀಪದ ಮಾವಿನ ಇಟಗಿಯಲ್ಲಿ ಸರ್ಕಾರಿ ಪ್ರೌಢಶಾಲೆ ಪ್ರಾರಂಭಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರಗೆ ಭಾನುವಾರ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆ ಇದ್ದು, 8ನೇ ತರಗತಿ ವರೆಗೆ ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಮುಂದಿನ ಕಲಿಕೆಗೆ ಬೇರೆಡೆಗೆ ಹೋಗಬೇಕಿದೆ. ಆದರೆ, ಮಕ್ಕಳು ಶಾಲೆಗೆ ತೆರಳಲು ಮತ್ತು ಸ್ಕೂಲ್‌ನಿಂದ ಮನೆಗೆ ಬರಲು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದೆ ನಿತ್ಯ ಐದು ಕೀ.ಮಿ. ದೂರದ ಹನುಮಸಾಗರಕ್ಕೆ ನಡೆದು ಬರಬೇಕಿದೆ. ಇದರಿಂದ ಮಕ್ಕಳು ಶಾಲೆಗೆ ತೆರಳಲು ಕಷ್ಟವಾಗುತ್ತಿದ್ದು, ಪ್ರೌಢ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸುವುದರಿಂದ ಸುತ್ತಲಿನ ಗುಡದೂರಕಲ್, ಚಂದ್ರಗಿರಿ, ವೆಂಕಟಾಪುರದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಈ ಎಲ್ಲ ಗ್ರಾಮಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಮಾವಿನಇಟಗಿಗೆ ಪ್ರೌಢಶಾಲೆ ಮಂಜೂರು ಮಾಡಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net