

ಸಿಂಧನೂರು: ಸಂವಿಧಾನ ಜೀವ ಸಂಕುಲಗಳನ್ನು ರಕ್ಷಿಸಿ ಉತ್ತಮ ಬದುಕು ಕಟ್ಟಿಕೊಡುವ ಆಡಳಿತಾತ್ಮಕ ಕಾನೂನಾಗಿದೆ ಎಂದು ತಹಸೀಲ್ದಾರ್ ಅರುಣ್ ದೇಸಾಯಿ ಹೇಳಿದರು.
ನಗರದ ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಲಿಖಿತ ಸಂವಿಧಾನ ರಚಿಸುವ ಮೂಲಕ ಎಲ್ಲರಿಗೂ ಸಲ್ಲುವ ಹಕ್ಕು ಮತ್ತು ಕರ್ತವ್ಯಗಳನ್ನು ಅಳವಡಿಸಿ ಸಶಕ್ತ ದೇಶ ನಿರ್ಮಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ. ಕಾನೂನಿನಡಿ ಎಲ್ಲರೂ ಸಮಾನರೆಂದು ಪ್ರತಿಪಾದಿಸಿ ಬಾಬಾ ಸಾಹೇಬರ ವಿಚಾರಧಾರೆ ನಮಗೆ ಮಾದರಿ ಎಂದರು.