

ಹಾಸನ: ಅಮರಶಿಲ್ಪಿ ಜಕಣಾಚಾರಿಯನ್ನು ಎಲ್ಲರೂ ನೆನೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಹೇಳಿದರು.
ವಿಶ್ವಕರ್ಮ ಜಯಂತಿ ಅಂಗವಾಗಿ ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೊಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇಂದಿಗೂ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರು ಇದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಡಾ.ಎಚ್.ಪಿ.ತಾರಾನಾಥ್, ಸಮುದಾಯದ ಮುಖಂಡರು ಹಾಜರಿದ್ದರು.