ವಿರೋಧಿಗಳಿಗೆ ದೇವರು ಸದ್ಬುದ್ಧಿ ಕರುಣಿಸಲಿ

24Huk2
Published on

ಹುಕ್ಕೇರಿ: ವಿರೋಧಿಗಳ ಟೀಕೆ-ಟಿಪ್ಪಣಿಗಳಿಗೆ ಉತ್ತರಿಸಲು ಹೋಗುವುದಿಲ್ಲ. ಆ ಕುರಿತು ತಲೆ ಕೆಡಿಸಿ ಕೊಳ್ಳುವುದಿಲ್ಲ. ನಾವು ಯಾರನ್ನೂ ಟೀಕಿಸುವು ದಿಲ್ಲ. ಮತ್ತೊಬ್ಬರನ್ನು ಬೈಯುವಂತಹ ಸಂಸ್ಕೃತಿಯೂ ನಮ್ಮದಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲೂಕಿನ ಘೋಡಗೇರಿ ಗ್ರಾಮದ ಹೊರವಲಯದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ವಿರೋಧಿ ಗಳು ಎಷ್ಟೇ ಅಪಪ್ರಚಾರ, ಸುಳ್ಳು ವದಂತಿ ಹಬ್ಬಿಸು ತ್ತಿದ್ದರೂ ಕಾರ್ಯಕರ್ತರು ಅವುಗಳಿಗೆ ಕಿವಿಗೊಡ ಬಾರದು. ನಾವು ಚುನಾವಣೆಯಲ್ಲಿ ಗೆಲ್ಲುವುದು ಶತಃಸಿದ್ಧ. ಟೀಕೆ ಮಾಡುವುದಕ್ಕಿಂತ ರೈತರ ಸಂಕಷ್ಟ ಪರಿಹರಿಸುವ ಒಳ್ಳೆಯ ಸದ್ಬುದ್ಧಿಯನ್ನು ದೇವರು ವಿರೋಧಿಗಳಿಗೆ ನೀಡಲಿ ಎಂದರು.

ಬದಲಾವಣೆ ಗಾಳಿ ಬೀಸುತ್ತಿದ್ದು ಸೆ.28ರಂದು ನಡೆಯುವ ಚುನಾವಣೆಯಲ್ಲಿ ದಿ.ಅಪ್ಪಣ್ಣಗೌಡ ಪಾಟೀಲ ಸಹಕಾರಿ ಪೆನಲ್ ಬೆಂಬಲಿಸುವಂತೆ ಮನವಿ ಮಾಡಿದರು. 30 ವರ್ಷ ವಿರೋಧಿ ಗುಂಪಿನ ಆಡಳಿತ ನೋಡಿದ್ದೀರಿ ಈ ಬಾರಿ ನಮಗೆ ಅಧಿಕಾರ ನೀಡಿ ನಮ್ಮ ಅಭಿವೃದ್ಧಿ ಕಾರ್ಯ ಗಮನಿಸಿ, ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯ ಸರ್ಕಾರದ ಪ್ರಭಾವಿ ಸಚಿವರಾಗಿದ್ದು, ಅವರ ನೆರವಿನಿಂದ ದಿವಾಳಿ ಅಂಚಿನಲ್ಲಿರುವ ವಿದ್ಯುತ್ ಸಹಕಾರಿ ಸಂಘದ ಪುನಶ್ಚೇತನ ಸಾಧ್ಯ. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಈ ಸಂಸ್ಥೆಯ ಬೆಳವಣಿಗೆಗೆ ಕೈ ಜೋಡಿಸಿದ್ದಾರೆ ಎಂದು ಹೇಳಿದರು. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಾರ್ಯಕರ್ತರು ಸತ್ಕರಿಸಿದರು. ಮಾಜಿ ಸಚಿವ ಶಶಿಕಾಂತ ನಾಯಿಕ, ಹಿರಾ ಶುಗರ್ಸ್ ಅಧ್ಯಕ್ಷ ಅಜ್ಜಪ್ಪ ಕಲ್ಲಟ್ಟಿ, ಬಸವರಾಜ ಮಟಗಾರ, ಅಶೋಕ ಅಂಕಲಗಿ, ಅಭ್ಯರ್ಥಿಗಳಾದ ಶಿವಕುಮಾರ ಮಟಗಾರ, ಅಮರ ನಲವಡೆ, ಅಶೋಕ ಪಟ್ಟಣಶೆಟ್ಟಿ, ಕಿರಣ ಕಲ್ಲಟ್ಟಿ, ಪ್ರಭುದೇವ ಪಾಟೀಲ, ಶಶಿರಾಜ ಪಾಟೀಲ, ಬಸಪ್ಪ ಮರಡಿ, ಬಸಗೌಡ ಮಗೆನ್ನವರ, ಶಂಕರೆಪ್ಪ ಶಿರಕೋಳಿ, ಭಾಗ್ಯಶ್ರೀ ಪಾಟೀಲ, ಸುಮಿತ್ರಾ ಶಿಡ್ಲಿಹಾಳ, ಶಂಕರ ಹೆಗಡೆ, ದಯಾನಂದ ಪಾಟೀಲ, ಲಕ್ಷ್ಮಣ ಹೂಲಿ, ಬಸವರಾಜ ನಾಯಿಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net