ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಲಿ

11 GVT 03
ಗಂಗಾವತಿ ತಾಲೂಕಿನ ಶ್ರೀರಾಮನಗರ ಸ್ವಾಮಿ ವಿವೇಕಾನಂದ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುವ ದಿನ ನಿಮಿತ್ತ ದುಶ್ಚಟಗಳ ವಿರುದ್ಧ ಜಾಗೃತಿ ಜಾಥಾ ನಡೆಯಿತು. ಶಾಲಾಡಳಿತ ಮಂಡಳಿ ಅಧ್ಯಕ್ಷ ಪ್ರಭಾಕರ ಚೆನ್ನುಪಾಟಿ, ಕಾರ್ಯದರ್ಶಿ ಜಗನ್ನಾಥ ಆಲ್ಲಂಪಲ್ಲಿ ಇತರರಿದರು.
Published on

ಗಂಗಾವತಿ: ತಾಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುವ ದಿನ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಯುವ ರಕ್ಷಣೆ, ರಾಷ್ಟ್ರೀಯ ರಕ್ಷಣೆ ೋಷಣೆಯೊಂದಿಗೆ ಪಟ್ಟಣದಾದ್ಯಂತ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು, ಶಾಲೆಯ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ದುಶ್ಚಟಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿದರು. ಶಾಲೆ ಆಡಳಿತ ಮಂಡಳಿ ಕಾರ್ಯದರ್ಶಿ ಜಗನ್ನಾಥ ಆಲ್ಲಂಪಲ್ಲಿ ಮಾತನಾಡಿ, ಯುವ ಶಕ್ತಿ ಮತ್ತು ವಿದ್ಯಾರ್ಥಿಗಳು ಮೊಬೈಲ್ ದಾಸರಾಗುವುದರೊಂದಿಗೆ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ.

ಧೂಮಪಾನ, ಮದ್ಯಪಾನ, ಬೆಟ್ಟಿಂಗ್‌ನಿಂದ ಯುವಕರನ್ನು ಮತ್ತು ಮಕ್ಕಳನ್ನು ಹೊರತರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು. ಸಂಸ್ಥಾಪಕ ಬಿ.ಪಾರ್ಥಸಾರಥಿ, ಉಪಾಧ್ಯಕ್ಷೆ ಪ್ರಿಯಾಕುಮಾರಿ, ತಾಪಂ ಮಾಜಿ ಅಧ್ಯಕ್ಷ ಮಹ್ಮದ್ ರಫೀ, ಮುಖ್ಯಶಿಕ್ಷಕಿ ಶಾರೂನ್ ಕುಮಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net