ಸಾಧಕರು ಇತರರಿಗೆ ಮಾರ್ಗದರ್ಶನ ನೀಡಲಿ

May the achievers guide others.
ಇಳಕಲ್ಲದ ಆರ್.ವೀರಮಣಿ ಭವನದಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸತ್ಕಾರ ಕಾರ್ಯಕ್ರಮವನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಹಂಪಿ ಹೇಮಕೂಟ ಗಾಯತ್ರಿ ಪೀಠದ ಜಗದ್ಗುರು ದಯಾನಂದಪುರಿ ಸ್ವಾಮೀಜಿ, ರವೀಂದ್ರ ಕಲಬುರ್ಗಿ, ಬಸವರಾಜ ಕುದರಿ, ಸತೀಶ ಸಪ್ಪರದ, ನಾರಾಯಣ ಬಿಜ್ಜಳ ಇದ್ದರು.
Published on

ಇಳಕಲ್ಲ (ಗ್ರಾ): ಪ್ರತಿಭಾ ಪುರಸ್ಕಾರದಿಂದ ಜವಾಬ್ದಾರಿ ಹೆಚ್ಚಾಗಿದೆ ಅಂತ ತಿಳಿದುಕೊಳ್ಳಬೇಕು. ತಮ್ಮಂತೆ ಸಾಧನೆ ಮಾಡುವಂತೆ ಇತರರಿಗೆ ಮಾರ್ಗದರ್ಶನ ಮಾಡಬೇಕು ಎಂದು ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದರು.

ನಗರದ ಆರ್.ವೀರಮಣಿ ಭವನದಲ್ಲಿ ಈಚೆಗೆ ಬಾಗಲಕೋಟೆ ಜಿಲ್ಲಾ ದೇವಾಂಗ ಸಂಘ, ಜಿಲ್ಲಾ ದೇವಾಂಗ ನೌಕರರ ಸಂಘ ಮತ್ತು ತಾಲೂಕು ದೇವಾಂಗ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸತ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಜತೆಗೆ ತಮ್ಮ ಕೊಡುಗೆ ಮೂಲಕ ಸಮಾಜದ ಋಣ ತೀರಿಸಬೇಕು ಎಂದರು.

ಹಂಪಿ ಹೇಮಕೂಟ ಗಾಯತ್ರಿ ಪೀಠದ ಜಗದ್ಗುರು ದಯಾನಂದಪುರಿ ಸ್ವಾಮೀಜಿ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಸಮಾಜದ ಎಲ್ಲ ಜನರನ್ನು ಒಂದೇ ವೇದಿಕೆಯಡಿ ತಂದು ಸಂಘಟನೆ ಮಾಡಬಹುದು. ಇಲ್ಲಿನ ನೌಕರರ ಸಂಘ ಅದ್ಭುತವಾಗಿ ಕಾರ್ಯಕ್ರಮ ಸಂಘಟಿಸಿ ಉತ್ತಮ ಕಾರ್ಯ ಮಾಡಿದೆ ಎಂದು ಹೇಳಿದರು.

ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಸತೀಶ ಸಪ್ಪರದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಜಿಲ್ಲಾ ದೇವಾಂಗ ನೌಕರರ ಸಂಘದ ಅಧ್ಯಕ್ಷ ಬಸವರಾಜ ಕುದರಿ, ತಾಲೂಕು ನೌಕರರ ಸಂಘದ ಅಧ್ಯಕ್ಷ ನಾರಾಯಣ ಬಿಜ್ಜಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net