ಎಲ್ಲ ಸೌಕರ್ಯ ಮಕ್ಕಳಿಗೆ ದೊರೆಯುವಂತಾಗಲಿ

gan
Published on

ಕುಂದಾಪುರ: ಸರ್ಕಾರ ಹಿಂದುಳಿದ ವರ್ಗಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ವಸತಿ ನಿಲಯ ಪ್ರಾರಂಭಿಸಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಹಾಸ್ಟೆಲ್ ಸೀಟುಗಳನ್ನು ಹೆಚ್ಚಿಸಲು ಸರ್ಕಾರ ಕ್ರಮಕೈಗೊಳ್ಳಬೇಕು. ಮೂಲಭೂತ ಸೌಲಭ್ಯಗಳಿದ್ದರೆ ಮಾತ್ರ ಮಕ್ಕಳಿಗೆ ಅನುಕೂಲವಾಗುತ್ತದೆ. ಎಲ್ಲ ಸೌಕರ್ಯಗಳು ಹಿಂದುಳಿದ ವರ್ಗಗಳ ಮಕ್ಕಳಿಗೆ ದೊರೆಯುವಂತಾಗಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಕುಂದಾಪುರ ಮೂಲ, ಹಂಗಳೂರು, ಶಂಕರನಾರಾಯಣ ಬೈಂದೂರು ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಕೆದೂರು, ಅಮಾಸೆಬೈಲು ಇವರ ಸಹಭಾಗಿತ್ವದಲ್ಲಿ ಹಂಗಳೂರಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾದ ನಿಲಯಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಪ್ರಭಾಕರ್, ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವೆಂಕಟರಮಣ ಭಟ್, ತಾಲೂಕು ಹಿಂದುಗಳಿದ ವರ್ಗಗಳ ಕಲ್ಯಾಣಾಧಿಕಾರಿ ಶಶಿಕಲಾ, ತಾಲೂಕು ಹಿಂದುಳಿದ ವರ್ಗಗಳ ನಿವೃತ್ತ ವಿಸ್ತರಣಾಧಿಕಾರಿ ಗಿರಿಧರ್ ಗಾಣಿಗ ಉಡುಪಿ ಮತ್ತಿತರರು ಉಪಸ್ಥಿತರಿದ್ದರು. ಆಶಾದೇವಿ ಸ್ವಾಗತಿಸಿದರು. ಸ್ವಾತಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net