ಮಲೆನಾಡಿನಲ್ಲಿ ಸಾಂಸ್ಕೃತಿಕ ವಾತಾವರಣ ಸಮೃದ್ಧಗೊಳ್ಳಲಿ

Janani
Published on

ಶಿರಸಿ: ಮಲೆನಾಡಿನಲ್ಲಿ ಸಾಂಸ್ಕೃತಿಕ ವಾತಾವರಣ ಇನ್ನಷ್ಟು ಸಮೃದ್ಧಗೊಳಿಸುವ ಕೆಲಸ ಆಗಬೇಕಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.

ನಗರದ ಜನನಿ ಮ್ಯೂಸಿಕ್ ಸಂಸ್ಥೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಶ್ರೀಕೃಷ್ಣಗಾನಾಮೃತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಲೆನಾಡಿನಲ್ಲಿ ಎಲ್ಲ ಕಲಾ ವಿಭಾಗಗಳಲ್ಲೂ ಸಾಕಷ್ಟು ಪ್ರತಿಭೆಗಳಿವೆ. ಅವರಿಗೆ ಸೂಕ್ತ ತರಬೇತಿ, ಮಾರ್ಗದರ್ಶನ ಅಗತ್ಯವಾಗಿದೆ ಎಂದರು.

ಕೆರೆಮನೆ ಇಡಗುಂಜಿ ಮೇಳದ ಕಾರ್ಯದರ್ಶಿ ರಾಜೇಶ್ವರಿ ಹೆಗಡೆ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ಕಲೆ ಮುಖ್ಯ. ಸಂಗೀತದ ಲಯ, ಸ್ವರ ಇಟ್ಟುಕೊಂಡು ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಕೆಎಂಎಫ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ, ಅಡಕೆ ವರ್ತಕ ಶಂಕರ ಹೆಗಡೆ ಇತರರು ಮಾತನಾಡಿದರು. ವಿದುಷಿ ರೇಖಾ ದಿನೇಶ ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯದರ್ಶಿ ದಿನೇಶ ಹೆಗಡೆ ಸ್ವಾಗತಿಸಿದರು. ಡಾ. ಪೂರ್ಣಿಮಾ ವಂದಿಸಿದರು. ರೂಪಾ ಹೆಗಡೆ ನಿರೂಪಿಸಿದರು. ಸಂಸ್ಥೆಯ ಹಿರಿಯ-ಕಿರಿಯ ಕಲಾವಿದರಿಂದ ಕಾರ್ಯಕ್ರಮ ವೈವಿಧ್ಯ ಪ್ರಸ್ತುತಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net