ಸರ್ಕಾರದ ಯೋಜನೆಗಳು ಸದ್ಬಳಕೆಯಾಗಲಿ

16 HANUR 1
Published on


ಚಾಮರಾಜನಗರ : ಪ್ರತಿಯೊಬ್ಬರೂ ಸರ್ಕಾರದ ಸವಲತ್ತುಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಆವರಣದಲ್ಲ್ಲಿ ಶನಿವಾರ ಮೀನುಗಾರಿಕೆ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.


ಸರ್ಕಾರ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ವಿವಿಧ ಇಲಾಖೆ ವತಿಯಿಂದ ಹಲವು ಸವಲತ್ತುಗಳನ್ನು ಒದಗಿಸುತ್ತಿದೆ. ಇದು ಕುಟುಂಬದ ನಿರ್ವಹಣೆಗೆ ಒಂದು ರೀತಿಯಲ್ಲಿ ಅನುಕೂಲವಾದರೆ ಮತ್ತೊಂದೆಡೆ ವೃತ್ತಿಯನ್ನು ಮುಂದುವರಿಸಿಕೊಂಡು ಹೋಗುವುದರ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ.

ಈ ದಿಸೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 10 ಸಾವಿರ ರೂ. ವೆಚ್ಚದಲ್ಲಿ ತಾಲೂಕಿನ 21 ಫಲಾನುಭವಿಗಳಿಗೆ ಮೀನುಗಾರಿಕೆ ಪರಿಕರಗಳನ್ನು ವಿತರಿಲಾಗುತ್ತಿದೆ. ಆದ್ದರಿಂದ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಜತೆಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಇದರಿಂದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.


ಮೀನುಗಾರಿಕೆ ಸಹಾಯಕ ನಿರ್ದೇಶಕ ಪ್ರಶಾಂತ್, ಮುಖಂಡರಾದ ತಂಗವೇಲು, ರಾಜೇಂದ್ರ, ಮಹದೇವ, ರಾಜುಗೌಡ, ಲಕ್ಷ್ಮಮ್ಮ, ಮಾಣಿಕ್ಯ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net