ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲಿ

24 DVD 01
ದೇವದುರ್ಗ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಪರೇಶ ವಿಠಲಾನಿಗೆ ಅಖಿಲ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದಿಂದ ಮನವಿ ಸಲ್ಲಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹೊನ್ನಪ್ಪ, ಸಿದ್ದನಗೌಡ, ರಂಗನಾಥ ಟಿ., ನವಿನ್, ಅನಂತ, ಶ್ರೀದೇವಿ, ಭಾಗ್ಯ, ನಾಗರತ್ನಾ, ಸ್ಟೆಲ್ಲಾ ಸುಮನ್, ಮಹಮ್ಮದ್ ಅಜರುದ್ದೀನ್ ಇತರರಿದ್ದರು.
Published on

ದೇವದುರ್ಗ: ರಾಜ್ಯದ ವಿವಿಧ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಪರೇಶ ವಿಠಲಾನಿಗೆ ಅಖಿಲ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕ ಸಂಘ ಗುರುವಾರ ಮನವಿ ಸಲ್ಲಿಸಿತು.

ಪಾಲಿಟೆಕ್ನಿಕ್ ಕಾಲೇಜು ಪ್ರವೇಶಾತಿ, ತರಗತಿಗಳು ಆರಂಭವಾಗುತ್ತಿದ್ದು ಇಂಥ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಆನ್‌ಲೈನ್ ಕೌನ್ಸೆಲಿಂಗ್ ಕರೆದಿದ್ದು ಖಂಡನೀಯ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ಉಪನ್ಯಾಸಕರಿಗೆ ಸಮಸ್ಯೆ ಆಗಲಿದೆ. ಅಲ್ಲದೆ ಕೌನ್ಸೆಲಿಂಗ್‌ನಿಂದ ಬೇರೆ ಕಾಲೇಜಿಗೆ ವರ್ಗಾವಣೆಯಾಗುವುದರಿಂದ ಕುಟುಂಬ ನಿರ್ವಹಣೆ ಸಮಸ್ಯೆಯಾಗಲಿದೆ. ಇದರಿಂದ ಕೆಲ ಹಿರಿಯರಿಗೆ ಅವಕಾಶ ತಪ್ಪಲಿದೆ ಎಂದು ಆರೋಪಿಸಿದರು.

ಕೂಡಲೇ ಈ ಹಿಂದೆ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರನ್ನು 2025-26ನೇ ಸಾಲಿನಲ್ಲೂ ಮುಂದುವರಿಸಬೇಕು. ಸೇವೆ ಪರಿಗಣಿಸಿ ವರ್ಷಕ್ಕೆ 5ರಂತೆ ಕೃಪಾಂಕ ನೀಡುವ ಪದ್ಧತಿ ಜಾರಿಗೊಳಿಸಬೇಕು. ವೇತನ ಹೆಚ್ಚಳ ಮಾಡಿ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಬರೆದ ಪತ್ರವನ್ನು ಪ್ರಾಚಾರ್ಯ ಪರೇಶಗೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net