

ವಿಜಯಪುರ: ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ನೀರಾವರಿಯಂತಹ ಹಲವು ಯೋಜನೆಗಳ ಪೂರಕ ವರದಿಯನ್ನು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ವಿಶ್ವಾಸ ವ್ಯಕ್ತಪಡಿಸಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತ ಪ್ರೊ. ಎಂ. ಗೋವಿಂದರಾವ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಸಮಗ್ರ ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ವರದಿ ಪೂರಕವಾಗಿರಲಿ ಎಂದು ತಿಳಿಸಿದರು.
ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ನೀರಾವರಿಯಂತಹ ಹಲವು ಯೋಜನೆಗಳನ್ನು ರೂಪಿಸಿ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಸರ್ಕಾರದ ಯೋಜನೆಗಳ ಲಾಭ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತಾಗಲು ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಶಿಕ್ಷಣ ಹಾಗೂ ಆರೋಗ್ಯ ೇತ್ರಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಶಿಫಾರಸು ಮಾಡಲು ಶಾಸಕರು ತಿಳಿಸಿದರು.
ಜಿಲ್ಲೆಯ ಪ್ರವಾಸಿ ತಾಣಗಳ ಬೆಳವಣಿಗೆ, ಕೃಷಿ ೇತ್ರ, ಯುವಕರಿಗೆ ಉದ್ಯೋಗ, ಕುಡಿಯುವ ನೀರು ಸೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಕೋನ ಇಟ್ಟುಕೊಂಡು ಸಮಿತಿ ವರದಿ ನೀಡಬೇಕು. ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸುವಂತೆ ಸೂಚಿಸಿದರು.
ಸಮಿತಿ ಸದಸ್ಯ ಡಾ. ಎಸ್.ಟಿ. ಬಾಗಲಕೋಟೆ ಮಾತನಾಡಿ, ಶಿಕ್ಷಣ, ಆರೋಗ್ಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ೇತ್ರ ಹಾಗೂ ಸಾಮಾಜಿಕ ವಲಯಗಳು ಸೇರಿ ವಿವಿಧ ಮಾನದಂಡಗಳ ಆಧಾರ ಮೇಲೆ ಹಿಂದುಳಿದ ತಾಲೂಕುಗಳ ಅಬಿವೃದ್ಧಿಗೆ ಅಗತ್ಯ ಸೌಲಭ್ಯ ಒದಗಿಸಲು ರಾಜ್ಯಾದ್ಯಂತ ಅಧ್ಯಯನ ಕೈಗೊಂಡಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ. ವಿಜಯಪುರ ಜಿಲ್ಲೆ ಒಳಗೊಂಡಂತೆ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಿತಿ ಅಧ್ಯಯ ಪೂರ್ಣಗೊಂಡಿದೆ.
ಡಾ. ಡಿ.ಎಂ. ನಂಜುಡಪ್ಪ ವರದಿ ಅನುಷ್ಠಾನದಲ್ಲಿ ಆದ ಅಭಿವೃದ್ಧಿ ಮತ್ತು ಬದಲಾವಣೆಯ ವಿಷಯಗಳ ಅಧ್ಯಯನ ಮಾಡಿ ಅದಕ್ಕೆ ಪೂರಕವಾಗಿ ಅಸಮತೋಲನ ನಿವಾರಣೆಗೆ ಅಗತ್ಯ ಇರುವ ಅಂಶಗಳ ಸಂಗ್ರಹಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಮಿತಿಯ ಸದಸ್ಯ ಕಾರ್ಯದರ್ಶಿ, ಯೋಜನೆ ಹಾಗೂ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ವಿಶಾಲ ಆರ್. ಮಾತನಾಡಿ, ವಿಜಯಪುರ ಜಿಲ್ಲೆ ಕೃಷಿ ಅವಲಂಬಿತ ಜಿಲ್ಲೆಯಾಗಿದೆ. ಕೃಷಿ ಸಂಸ್ಕರಣೆ, ಸೇವಾವಲಯದಲ್ಲಿ ಕೌಶಲಾಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ೇತ್ರಕ್ಕೆ ಒತ್ತು ನೀಡಲಾಗುವುದು. ಜಿಲ್ಲೆಯಲ್ಲಿ ಮುಖ್ಯವಾಗಿರುವ ಪ್ರವಾಸೋದ್ಯಮ ಬೆಳವಣಿಗೆ ಹಾಗೂ ಸೇವಾ ವಲಯ ಸುಧಾರಣೆಗೆ ಬೇಕಾದ ಅಗತ್ಯ ಕ್ರಮಗಳ ಕುರಿತು ವರದಿಯಲ್ಲಿ ನಮೂದಿಸಲಾಗುವುದು ಎಂದು ಸಭೆಗೆ ತಿಳಿಸಿದರು.
ಮಹಿಳಾ ವಿವಿಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯಕ್ಕಾಗಿ ಮಹಿಳಾ ವಿವಿಯ ರಿಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರ ಕೋರಿಕೆಗೆ ಸಕಾರತ್ಮಕವಾಗಿ ಸ್ಪಂದಿಸಿ, ಮಹಿಳಾ ಸಬಲೀಕರಣಕ್ಕೆ ಒತ್ತು ಹಾಗೂ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೋತ್ಸಾಹ ನೀಡುವ ಅಗತ್ಯತೆಯನ್ನು ಸಮಿತಿ ಗಮನಿಸಿದೆ ಎಂದರು.
ಸಮಿತಿ ಸದಸ್ಯೆ ಸಂಗೀತಾ ಎನ್.ಕೆ., ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಪಂ ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಪಂ ಉಪ ಕಾರ್ಯದರ್ಶಿ ವಿಜಯ ಆಜೂರ ಮತ್ತಿತರರಿದ್ದರು.