

ತರೀಕೆರೆ: ಮಹನೀಯರ ತ್ಯಾಗ, ಬಲಿದಾನದ ಪರಿಣಾಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಸ್ವಾತಂತ್ರೃ ವೀರರ ತ್ಯಾಗ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ನಮಗೆ ಯಾವುದೇ ಸವಾಲನ್ನು ಎದುರಿಸಲು ಪ್ರೇರಣೆ ನೀಡಿ ಭವ್ಯ ರಾಷ್ಟ್ರ ನಿರ್ಮಾಣದ ಕರ್ತವ್ಯಗಳನ್ನು ನೆನಪಿಸುತ್ತದೆ. ಪ್ರತಿಯೊಬ್ಬರೂ ಸ್ವಾತಂತ್ರ್ಯೋತ್ಸವದ ಅರ್ಥ ತಿಳಿದು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದರು.
ಎಸಿ ಡಾ. ಕೆ.ಜೆ.ಕಾಂತರಾಜ್ ಮಾತನಾಡಿ, ಮಹಾತ್ಮ ಗಾಂಧಿ ನೇೀತೃತ್ವದಲ್ಲಿ ನಡೆದ ಅಸಹಕಾರ ಚಳವಳಿ ಇತರ ಹೋರಾಟಗಳು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಲು ಕಾರಣವಾಗಿವೆ. ಸಂವಿಧಾನ ಬದ್ಧವಾಗಿ ಸರ್ವರಿಗೂ ಸಮಾನ ಶಿಕ್ಷಣ, ಆರೋಗ್ಯ ವ್ಯವಸ್ಥೆ ಸಿಗಬೇಕು. ಈ ದಿಸೆಯಲ್ಲಿ ಮತ್ತಷ್ಟು ಪ್ರಯತ್ನಗಳಾಗಬೇಕು ಎಂದು ಹೇಳಿದರು.
ವಿವಿಧ ಶಾಲೆ ಮಕ್ಕಳು, ಪೊಲೀಸ್, ಗೃಹ ರಕ್ಷಕ ದಳದ ಸಿಬ್ಬಂದಿ ನಡೆಸಿದ ಪಥ ಸಂಚಲನ ಆಕರ್ಷವಾಗಿತ್ತು. ನಾಡ ಹಬ್ಬಗಳ ಸಮಿತಿಯಿಂದ ಲಿಂಗದಹಳ್ಳಿ ಹೋಬಳಿ ವಿಜಯವಾಣಿ ವರದಿಗಾರ ಎನ್.ಎಸ್.ಪರಮೇಶ್ವರಪ್ಪ ಸೇರಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ವಿ.ಎಸ್.ರಾಜೀವ್, ತಾಪಂ ಇಒ ಡಾ. ಆರ್.ದೇವೇಂದ್ರಪ್ಪ, ಡಿವೈಎಸ್ಪಿ ಡಾ. ಹಾಲಮೂರ್ತಿ ರಾವ್, ಬಿಇಒ ಬಿ.ಗೋವಿಂದಪ್ಪ, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಜಯಕುಮಾರ್ ಇತರರಿದ್ದರು.