ತರಬೇತಿಗಳು ಸದುಪಯೋಗವಾಗಲಿ

1
Published on

ಸುಂಟಿಕೊಪ್ಪ: ವೈಯಕ್ತಿಕ ಕೌಶಲಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತರಬೇತಿಗಳನ್ನು ನೀಡಲಾಗುತ್ತಿದ್ದು, ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳುವುದರಿಂದ ಜ್ಞಾನ ವೃದ್ಧಿಸಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್ ಹೇಳಿದರು.


ಇಲ್ಲಿನ ಶ್ರೀರಾಮ ಮಂದಿರ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ಶ್ರೀ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನವಿಕಾಸ ಮಾಹಿತಿ ಕೇಂದ್ರದ ವತಿಯಿಂದಲೂ ಪ್ರತಿ ತಿಂಗಳು ಹಲವು ವಿಚಾರಗಳ ಕುರಿತು ಮಾಹಿತಿ ತರಬೇತಿ ನೀಡಲಾಗುತ್ತಿದ್ದು, ಆ ಮೂಲಕ ಪ್ರತಿ ಸದಸ್ಯನನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.


ತಲಕಾವೇರಿ ಜ್ಞಾನವಿಕಾಸ ಸದಸ್ಯರಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿ, ವಿಜೇತರಿಗೆ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷರಾದ ಖತ್ತೀಜ ಹಾಗೂ ಭವ್ಯಾ ಬಹುಮಾನ ವಿತರಿಸಿದರು. ಸಂಘದ ಸದಸ್ಯೆ ದೇವಕ್ಕಿ, ಸೇವಾ ಪ್ರತಿನಿಧಿ ಯಶೋದಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net