ಉಳ್ಳಾಲ ರಾಣಿ ಅಬ್ಬಕ್ಕಳ ಆದರ್ಶ ರೂಢಿಸಿಕೊಳ್ಳಲಿ

pdb (4)
Published on

ಪಡುಬಿದ್ರಿ: ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಬದುಕುವುದರ ಜತೆಗೆ ಉಳ್ಳಾಲದ ರಾಣಿ ಅಬ್ಬಕ್ಕಳ ಆದರ್ಶಗಳ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾಪು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಪುಂಡಲೀಕ ಮರಾಠೆ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗ ಮತ್ತು ಪಲಿಮಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಬ್ಬಕ್ಕ- 500 ಪ್ರೇರಣಾದಾಯಿ ಉಪನ್ಯಾಸಗಳ ಸರಣಿ-ಎಸಳು 72 ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಸಾದ್ ಪಲಿಮಾರು ಉದ್ಘಾಟಿಸಿದರು. ಪ್ರಾಂಶುಪಾಲೆ ಗ್ರೆಟ್ಟಾ ಮೊರಾಸ್, ಉಪನ್ಯಾಸಕರಾದ ಸುಶ್ಮಿತಾ, ನವಿತಾ, ವಿಕ್ರಮ್ ಉಪಸ್ಥಿತರಿದ್ದರು. ಯಶವಂತ ಕುದ್ರೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಶುಭಲಕ್ಷ್ಮೀ ಆರ್.ನಾಯಕ್ ಸ್ವಾಗತಿಸಿದರು. ಚೈತ್ರಾ ವಂದಿಸಿದರು. ಸ್ವಾತಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net