ಸಹಕಾರಿ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸುವಂತಾಗಲಿ

gan (16)
Published on

ಕುಂದಾಪುರ: ಪ್ರಕಾಶ್ಚಂದ್ರ ಶೆಟ್ಟಿ ಅವರು ಕೃಷಿ, ಧಾರ್ಮಿಕ, ಸಹಕಾರಿ, ಹೈನುಗಾರಿಕೆ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ವಿಶೇಷ ಛಾಪು ಮೂಡಿಸಿದ್ದಾರೆ. ಯಾವುದಕ್ಕೂ ರಾಜಿ ವಾಡಿಕೊಳ್ಳದ ವ್ಯಕ್ತಿತ್ವದವರು. ಕುಂದಾಪುರ ತಾಲೂಕಿನ ಎಲ್ಲ ಸಹಕಾರಿಗಳ ಸಮ್ಮುಖದಲ್ಲಿ ಸನ್ಮಾನ ವಾಡಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಸಹಕಾರಿ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಿ ಕೀರ್ತಿ ದೊರೆಯುವಂತಾಗಲಿ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು.

ಅವಿಭಜಿತ ಕುಂದಾಪುರ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಗಳ ಆಶ್ರಯದಲ್ಲಿ ಕುಂದಾಪುರ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಭಾನುವಾರ ಜರುಗಿದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅಭಿನಂದನಾ ಸವಾರಂಭದಲ್ಲಿ ವಾತನಾಡಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸಹಕಾರಿ ಸಂದಲ್ಲಿ ಪ್ರಕಾಶ್ಚಂದ್ರ ಶೆಟ್ಟಿ ಅವರು ಕಳೆದ 25-30 ವರ್ಷಗಳಿಂದ ಜನರಿಗೆ ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂದ ಅಧ್ಯಕ್ಷ, ಕರ್ನಾಟಕ ರಾಜ್ಯ ಸರ್ಕಾರದ 2024-25ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕೃಷಿ ಪತ್ತಿನ ಸಹಕಾರ ಸಂಗಳ ಅಧ್ಯಕ್ಷರಾದ ಸದಾನಂದ ಶೆಟ್ಟಿ, ಕೃಷ್ಣಮೂರ್ತಿ, ಜಯರಾಮ ಶೆಟ್ಟಿ, ಸಂತೋಷ್ ಕುವಾರ್ ಶೆಟ್ಟಿ, ಪ್ರದೀಪ್ ಯಡಿಯಾಳ್, ಸುಧಾಕರ ಶೆಟ್ಟಿ ಬಾಂಡ್ಯ, ಸಬ್ಲಾಡಿ ಮಂಜಯ್ಯ ಶೆಟ್ಟಿ, ನಾರಾಯಣ ಹೆಗ್ಡೆ, ಜಗದೀಶ ಪೂಜಾರಿ, ಸದಾನಂದ ಶೆಟ್ಟಿ, ವಿಜಯ ಶಾಸಿ, ಉಮೇಶ ಶೆಟ್ಟಿ ಕಲ್ಗದ್ದೆ, ಮಂಜಯ್ಯ ಶೆಟ್ಟಿ ಹರ್ಕೂರು, ಚಂದ್ರಶೇಖರ ಅಡಿಗ, ಪ್ರಭಾಕರ ಶೆಟ್ಟಿ, ಸದಾನಂದ ಬಳ್ಕೂರು, ಪ್ರದೀಪ ಕುವಾರ್ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಕೃಷಿ ಪತ್ತಿನ ಸಹಕಾರಿ ಸಂಗಳ ನೌಕರರ ಸಂದ ಅಧ್ಯಕ್ಷ ವಿಶ್ವೇಶ್ವರ ಹಗ್ಡೆ ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net