ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ

6GKK1
Published on

ಗೋಕಾಕ: ಪ್ರಶಿಕ್ಷಣಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ ಜ್ಞಾನ ವೃದ್ಧಿಸಿಕೊಳ್ಳುವ ಮೂಲಕ ವೃತ್ತಿ ಜೀವನದಲ್ಲಿ ಸಮಾಜಕ್ಕೆ ಉತ್ತಮ ನಾಗರಿಕರನ್ನು ಕೊಡುಗೆ ನೀಡಬೇಕು ಎಂದು ರಾಣಿ ಚನ್ನಮ್ಮ ವಿವಿಯ ಶಿಕ್ಷಣಶಾಸ ವಿಭಾಗದ ಅಧ್ಯಕ್ಷ ಡಾ.ಎರ‌್ರಿಸ್ವಾಮಿ ಎಂ.ಸಿ. ಹೇಳಿದರು.

ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕಾಲೇಜ್ ಆ್ ಎಜುಕೇಷನ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ವಿವಿಧ ವಿಷಯ ಸಂಘಗಳ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರ ನಿಮಾಣದ ಶಿಲ್ಪಿಗಳಾದ ಶಿಕ್ಷಕರು ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಬೇಕು.ಪಠ್ಯೇತರ ಚಟುವಟಿಕೆ ವ್ಯಕ್ತಿತ್ವದ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿವೆ. ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರವಂತರಾಗಿ ಬದುಕು ಬದಲಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆಡಳಿತಾಧಿಕಾರಿ ಬಿ.ಕೆ.ಕುಲಕರ್ಣಿ, ಪ್ರಾಚಾರ್ಯ ಡಾ.ಎ.ಬಿ.ಪಾಟೀಲ, ವಿದ್ಯಾರ್ಥಿ ಪ್ರತಿನಿಧಿಗಳಾದ ಶಿಲ್ಪಾ ಪಟಗುಂದಿ, ವೈಷ್ಣವಿ ಮಾತಾಡೆ ಇತರರಿದ್ದರು. ಶುಭಾಂಗಿ ಸ್ವಾಗತಿಸಿದರು. ಸೀಮಾ ಪಾಟೀಲ ನಿರೂಪಿಸಿದರು. ರಾಘವೇಂದ್ರ ಸವದತ್ತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net