

ಬೀದರ್: ಕಾಲೇಜಿನ ಹಾಸ್ಟೆಲ್ನಲ್ಲೇ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.
ಬಸವಕಲ್ಯಾಣ ಮೂಲದ ವಿನೀತ್ ವಿಜಯಕುಮಾರ ಕಾಂಬಳೆ( 24) ಮೃತ ದುರ್ದೈವಿ. ಈತ ಬೀದರ್ನ ಬ್ರಿಮ್ಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಬ್ರಿಮ್ಸ್ ಹಾಸ್ಟೆಲ್ನಲ್ಲೇ ಇದ್ದ.
ಇಂದು ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ವಿನೀತ್ ವಿಜಯಕುಮಾರ ಕಾಂಬಳೆಯ ಶವ ಪತ್ತೆಯಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಗೊತ್ತಾಗಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ನ್ಯೂ ಟೌನ್ ಠಾಣೆ ಪಿಎಸ್ಐ ಸಂತೋಷ ತಟ್ಟೆಪಲ್ಲಿ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ.