ಕಸ ಎಸೆತ : ಮನಪಾದಿಂದ ದಂಡ ವಸೂಲು

kkkkkkkkkk
Published on

ಮಂಗಳೂರು : ನಗರದ ಮಣ್ಣಗುಡ್ಡ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಮಂಗಳೂರು ಮಹಾ ನಗರ ಪಾಲಿಕೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4 ಸಾವಿರ ರೂ. ದಂಡ ವಿಧಿಸಿ, ಮೊತ್ತ ವಸೂಲಿ ಮಾಡಲಾಗಿದೆ.
ನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟಾಗುತ್ತಿದೆ. ಈ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸ್ವಚ್ಚತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net