ಕರ್ತವ್ಯಕ್ಕೆ ಗೈರು ಶಿಕ್ಷಕರ ವಿರುದ್ಧ ‌ಕ್ರಮ; ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

madhu-bangarappa-01.jpg
Published on

ಬೆಳಗಾವಿ: ಕರ್ತವ್ಯಕ್ಕೆ ಗೈರು ಹಾಜರಾಗಿ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವ ಶಿಕ್ಷಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಎಚ್ಚರಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಮಕ್ಕಳಿಗೆ ಪಾಠ ಮಾಡಬೇಕು, ಶೈಕ್ಷಣಿಕ ಸುಧಾರಣೆ ಗಳಲ್ಲಿ ತೊಡಗಿಸಿಕೊಳ್ಳಬೇಕು. ಅದನ್ನು ಬೇರೆ ಕೆಲಸದಲ್ಲಿ ತೊಡಗಿಸಿಕೊಳ್ಳುವುದು, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡರೆ ಕ್ರಮ ಖಚಿತ ಎಂದರು.

ಶಾಲೆಗೆ ಚಕ್ಕರ ಹಾಕಿ ಬೇರೆ ಬೇರೆ ಕೆಲಸ ಮಾಡುವ ಶಿಕ್ಷಕರ ಮೇಲೆ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಶಿಕ್ಷಕರು ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ಚಕ್ಕರ ಹಾಕುವ ಶಿಕ್ಷಕರಿಂದ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net