ಎಂಡಿಎಂಎ ಹೊಂದಿದ ಇಬ್ಬರು ಆರೋಪಿಗಳ ಸೆರೆ

mng--9 june MDMA 2
Published on

ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎ ಕಾರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಅಪರಾಧ ಪತ್ತೆದಳ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ಫರಂಗಿಪೇಟೆ ನಿವಾಸಿ ಮಹಮ್ಮದ್ ಆಶ್ರಫ್ ಚೋಟಾ ಆಶ್ರಫ್(43), ಪೆರ್ಮನ್ನೂರು ನಿವಾಸಿ ದಾವೂದ್ ಫರ್ವೆಝ್(36) ಬಂಧಿತರು.
ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಕಾರಿನಲ್ಲಿ ಖರೀದಿಸಿಕೊಂಡು ಮಂಗಳೂರಿಗೆ ಬಂದು ಮಂಗಳೂರು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರ ಬಳಿ ಮಾದಕ ವಸ್ತು ಪತ್ತೆಯಾಗಿದೆ.


ಆರೋಪಿಗಳಿಂದ ಒಟ್ಟು 55.5 ಗ್ರಾಂ ತೂಕದ 2,77,500 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್‌ಗಳು-2, 3230 ರೂ. ನಗದು, ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್‌ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ 13,06,230 ರೂ. ಆಗಬಹುದು. ಈ ಬಗ್ಗೆ ಆರೋಪಿಗಳ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿವೆ. ಇನ್ನೋರ್ವ ಆರೋಪಿ ದಾವೂದ್ ಪರ್ವೇಸ್ ವಿರುದ್ದ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿವೆ.


ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್.ಎಂ. ಪಿಎಸ್‌ಐ ಸುದೀಪ್ ಎಂ.ವಿ. ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net