ಆರೋಗ್ಯದ ಬಗ್ಗೆ ವಿಶೇಷ ಗಮನ ವಹಿಸಿ

18M.D.R.4
Published on

ಮದ್ದೂರು : ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ವಿಶೇಷ ಗಮನವಹಿಸುವ ಮೂಲಕ ಆನಂದಕರ ಜೀವನ ನಡೆಸಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ. ರವೀಂದ್ರ ಹೇಳಿದರು.ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಅಧಿಕ ರಕ್ತದೊತ್ತಡ ದಿನ’ ಜಾಗೃತಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅತಿಯಾಸೆ ಹಾಗೂ ಜಂಜಾಟದ ಬದುಕಿನ ಒತ್ತಡದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಇದರಿಂದ ಆರೋಗ್ಯ ಹಾಳಾಗುತ್ತಿದೆ. ಇದಕ್ಕೆ ಆಸ್ಪದೆ ಕೊಡದೆ ನಿಯಮಿತ ವ್ಯಾಯಾಮ, ಯೋಗ, ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ವನ್ನು ನಮ್ಮದಾಗಿಸಿ ಕೊಳ್ಳಬೇಕೆಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ ಹೆಚ್ಚಿನ ಜನರಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ. ಆದ್ದರಿಂದ ಪ್ರತಿಯೊಬ್ಬರೂ ನಿಗದಿತವಾಗಿಆರೋಗ್ಯ ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು. ಆರೋಗ್ಯಾಧಿಕಾರಿ ತಮ್ಮೇಗೌಡ ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net